2026-03-07 05:01:33

RCB matches will be held in Bengaluru | ಗುಡ್‌ ನ್ಯೂಸ್! ಬೆಂಗಳೂರಿನಲ್ಲಿ ನಡೆಯಲಿವೆ ಆರ್‌ ಸಿಬಿ ಪಂದ್ಯಗಳು | Speed News Kannada

RCB matches will be held in Bengaluru | ಗುಡ್‌ ನ್ಯೂಸ್! ಬೆಂಗಳೂರಿನಲ್ಲಿ ನಡೆಯಲಿವೆ ಆರ್‌ ಸಿಬಿ ಪಂದ್ಯಗಳು | Speed News Kannada

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ. ಮುಂಬರುವ ಸರಣಿಯ ಐದು ಪಂದ್ಯಗಳನ್ನು ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. 
ಕಳೆದ ಬಾರಿ ಐಪಿಎಲ್‌ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿದ ಹಿನ್ನೆಲೆ ಈ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳನ್ನ ಆಡಿಸದಂತೆ ಆದೇಶ ಹೊರಡಿಸಲಾಗಿತ್ತು.

2025ರ ಐಪಿಎಲ್‌ ಫೈನಲ್‌ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ವೇಳೆ ಆರ್‌ಸಿಬಿ ಬಲಿಷ್ಠ ಪಂಜಾಬ್ ಕಿಂಗ್ಸ್ ಮಣಿಸಿ ಚೊಚ್ಚಲ ಚೊಚ್ಚಲ ಟ್ರೋಫಿ ಗೆದ್ದಿತ್ತು. ಮರು ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು. ಅಂದಿನಿಂದ ಈ ಮೈದಾನಲ್ಲಿ ಯಾವುದೇ ಪಂದ್ಯಗಳನ್ನು ಆಡಿಸಿರಲಿಲ್ಲ.
ಆದರೆ, ಇದೀಗ ಆರ್‌ಸಿಬಿ ಇದೀಗ ಇಲ್ಲಿ ಐದು ಪಂದ್ಯಗಳನ್ನು ಆಡಿಸಲು ಒಪ್ಪಿಗೆ ಸೂಚಿಸಿದೆ. ಬೆಂಗಳೂರು ತಂಡದ ಉದ್ಘಾಟನಾ ಪಂದ್ಯ ಕೂಡ ಇಲ್ಲೇ ನಡೆಯಲಿದ್ದು, ತವರು ನೆಲದಲ್ಲಿ ಪಂದ್ಯಗಳು ನಡೆಯುತ್ತಿರುವುದು ತಂಡಕ್ಕೆ ಹೆಚ್ಚಿನ ಬಲ ಸಿಗಲಿದೆ. ಆರ್‌ಸಿಬಿ ಫ್ರಾಂಚೈಸಿಯು ಈ ಕುರಿತು ಕೆಎಸ್‌ಸಿಎ ಜೊತೆ ಮಾತುಕತೆ ನಡೆಸಿ ಅಧಿಕೃತ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.