2026-04-24 01:41:55

RCB Vs CSK | FIR against seven people who were selling tickets in black|RCB Vs CSK | ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ FIR|Speed News Kannada

RCB Vs CSK | FIR against seven people who were selling tickets in black|RCB Vs CSK | ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ FIR|Speed News Kannada

ಆರ್‌ಸಿಬಿ (RCB) ಹಾಗೂ ಸಿಎಸ್‌ಕೆ (CSK) ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಏಳು ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹೀದ್, ಲಿಖಿತ್, ಪುನೀತ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಮಾನಿಟರಿಂಗ್ ಮಾಡಿದ್ದು, ಆರೋಪಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರತ್ಯೇಕ ಮೂರು ಎಫ್‌ಐಆರ್‌ಗಳು ದಾಖಲಾಗಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.