ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಸೀಸನ್ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ನಿನ್ನೆ ಬೆಂಗಳೂರಿನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದಾರಬಾದ್, 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ಗಳನ್ನು ಕಲೆಹಾಕಿತು. ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡ ಹೈದರಾಬಾದ್ ಇಶಾನ್ ಕಿಶನ್ ಸ್ಫೋಟಕ 80 ರನ್ಗಳ ಇನ್ನಿಂಗ್ಸ್ ಆಡಿದರೆ, ಆರ್ಸಿಬಿ ಪರ ಡಫಿ ಪ್ರಮುಖ 3 ವಿಕೆಟ್ ಪಡೆದರು.
202ರ ಗುರಿ ಬೆನ್ನತ್ತಿದ್ದ ಆರ್ಸಿಬಿ ಆರಂಭದಿಂದಲೇ ಭರ್ಜರಿ ಬ್ಯಾಟಿಂಗ್ ಶುರುಮಾಡಿದರು. ಆರ್ಸಿಬಿ ತಂಡದ ದೇವದತ್ತ್ ಪಡಿಕಲ್ ಸ್ಫೋಟಕ ಬ್ಯಾಟಿಂಗ್ ಪದರ್ಶಿಸಿದರು ಹಾಗೂ ವಿರಾಟ್ ಕೊಹ್ಲಿಯ ಭರ್ಜರಿ ಅರ್ಧ ಶತಕದ ನೆರವಿನಿಂದ ಕೇವಲ 15.4 ಓವರ್ ಗಳಲ್ಲಿ 203ರನ್ ಗಳಿಸುವ ಮೂಲಕ ಆರ್ ಸಿಬಿ ಆರು ವಿಕೆಟ್ ಗಳ ಗೆಲುವು ಸಾಧಿಸಿತು.