2026-06-08 04:31:45

Record results for SSLC students, 91.6% results declared | SSlC ವಿದ್ಯಾರ್ಥಿಗಳ ದಾಖಲೆ ಫಲಿತಾಂಶ, ಶೇ 91.6ರಷ್ಟು ಫಲಿತಾಂಶ ಪ್ರಕಟ | Speed news kannada

Record results for SSLC students, 91.6% results declared | SSlC ವಿದ್ಯಾರ್ಥಿಗಳ ದಾಖಲೆ ಫಲಿತಾಂಶ, ಶೇ 91.6ರಷ್ಟು ಫಲಿತಾಂಶ ಪ್ರಕಟ | Speed news kannada

ಇತಿಹಾಸದಲ್ಲಿ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕರ್ನಾಟಕದಲ್ಲಿ ಶೇ 91.6 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದ ಪರೀಕ್ಷೆಗೆ ಒಟ್ಟು 8.6 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಬಾರಿಯ ಪರೀಕ್ಷೆಯಲ್ಲಿ ಮೂರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನೂ ಪಡೆದುಕೊಂಡಿದ್ದಾರೆ. ಹಾಸನದ ಜಾನ್ಹವಿ , ಉತ್ಸವ ಪಾಟೀಲ್‌, ಮತ್ತು ಬೇಳಗಾವಿ ರೂಪ ಚನಗೌಡ ಪಾಟೀಲ್‌ 625 ಅಂಕಗಳನ್ನೂ ಗಳಿಸಿದ್ದಾರೆ. ಕರ್ನಾಟಕ SSlC ಪರೀಕ್ಷೆ ಕುರಿತು ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್‌ ಬಂದಿದೆ. ಹಾಗೂ ಕೊನೆಯ ಸ್ಥಾನವನ್ನು ಕಲಬುರಗಿ ಜಿಲ್ಲೆ ಪಡೆದುಕೊಂಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.