2026-03-07 04:59:06

Repeated Atrocities Against Female Officers In The state! | ರಾಜ್ಯದಲ್ಲಿ ಪದೇ ಪದೆ ಮಹಿಳಾ ಅಧಿಕಾರಿಗಳ ಮೇಲೆ ದೌರ್ಜನ್ಯ! | Speed News Kannada

Repeated Atrocities Against Female Officers In The state! | ರಾಜ್ಯದಲ್ಲಿ ಪದೇ ಪದೆ ಮಹಿಳಾ ಅಧಿಕಾರಿಗಳ ಮೇಲೆ ದೌರ್ಜನ್ಯ! | Speed News Kannada

ಮಹಿಳಾ ಅಧಿಕಾರಿಗಳ ಮೇಲೆ ಕೈ ಮಾಡಿರುವಂತ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆದ ಬೆನ್ನಲ್ಲೇ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ದಾವಣಗೆರೆಯಲ್ಲಿ ಮಹಿಳಾ ಸಿಪಿಐ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯ ಮೇಲೆ ನಡೆದ ಹಲ್ಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ನ ದಾವಣಗೆರೆ ದಕ್ಷಿಣ ಬ್ಲಾಕ್ ಅಧ್ಯಕ್ಷ ಆಯೂಬ್ ಪೈಲ್ವಾನ್ ಪುತ್ರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದು, ಘಟನೆ ಬಳಿಕ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಯ ಸಂಬಂಧ ಆಯೂಬ್ ಪೈಲ್ವಾನ್ ಅವರು ತಮ್ಮ ಮಕ್ಕಳಿಗೆ ಪರಾರಿಯಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪೊಲೀಸರು ಶನಿವಾರ ಬೆಳಗ್ಗೆ ಅವರನ್ನು ವಶಕ್ಕೆ ಪಡೆದು ಬಡಾವಣೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಬಿಎನ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್ ನೀಡಿದ ಪೊಲೀಸರು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರನ್ನು ಬಿಡುಗಡೆ ಮಾಡಿದ್ದಾರೆ. 

ಜನವರಿ 31ರಂದು ದಾವಣಗೆರೆ ಜಿಲ್ಲಾಸ್ಪತ್ರೆ ಸಮೀಪ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಆಯೂಬ್ ಪೈಲ್ವಾನ್ ಪುತ್ರರಾದ ಹುಸೇನ್, ಹಸೇನ್ ಹಾಗೂ ಹಮ್ಜಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಘಟನೆ ತೀವ್ರ ತಿರುವು ಪಡೆದುಕೊಂಡಿದೆ. ಬಂಧನಕ್ಕೆ ಬಂದ ಪೊಲೀಸರ ವಿರುದ್ಧ ಆಯೂಬ್ ಪೈಲ್ವಾನ್ ಪುತ್ರರು ಉದ್ಧಟತನ ಪ್ರದರ್ಶಿಸಿದ್ದು, ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ, ಪೇದೆ ಕೆಂಚಪ್ಪ ಹಾಗೂ ಪೇದೆ ಹರೀಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕರಣದ ಸಂಬಂಧ ಆರೋಪಿ ಹಸೇನ್‌ನನ್ನು ಪೊಲೀಸರು ಬಂಧಿಸಿದ್ದು, ಹುಸೇನ್ ಹಾಗೂ ಹಮ್ಜಾ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ದಾವಣಗೆರೆ ಎಸ್‌ಪಿ ಉಮಾಪ್ರಶಾಂತ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ, ಯಾರೇ ಆರೋಪಿಯಾಗಿದ್ದರೂ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.