ನವದೆಹಲಿ, ಜನವರಿ 26: ಭಾರತದ 77ನೇ ಗಣರಾಜ್ಯೋತ್ಸವಕ್ಕೆ ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದಾದ್ಯಂತ ಗಣರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿದ್ದಂತೆ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಈ ಸಂದೇಶವನ್ನು ಹಂಚಿಕೊಂಡಿದೆ. ಎರಡೂ ದೇಶಗಳ ನಡುವಿನ ಸಾಮಾನ್ಯ ನೆಲೆಯನ್ನು ಎತ್ತಿ ತೋರಿಸುತ್ತಾ, ಭಾರತ ಮತ್ತು ಅಮೆರಿಕ ತಮ್ಮ ಪ್ರಜಾಪ್ರಭುತ್ವ ಸಂಪ್ರದಾಯಗಳಿಂದ ಒಂದಾಗಿವೆ ಎಂದು ಟ್ರಂಪ್ ಒತ್ತಿ ಹೇಳಿದ್ದಾರೆ.
“ಯುನೈಟೆಡ್ ಸ್ಟೇಟ್ಸ್ ಜನರ ಪರವಾಗಿ ಭಾರತದ 77ನೇ ಗಣರಾಜ್ಯೋತ್ಸವಕ್ಕೆ ನಾನು ಭಾರತ ಸರ್ಕಾರ ಮತ್ತು ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಟ್ರಂಪ್ ಸಂದೇಶ ರವಾನಿಸಿದ್ದಾರೆ. ವಿಶ್ವದ ಅತ್ಯಂತ ಹಳೆಯ ಮತ್ತು ದೊಡ್ಡ ಪ್ರಜಾಪ್ರಭುತ್ವಗಳಾಗಿ ಅಮೆರಿಕ ಮತ್ತು ಭಾರತ ಐತಿಹಾಸಿಕ ಬಂಧವನ್ನು ಹಂಚಿಕೊಂಡಿವೆ” ಎಂದು ಟ್ರಂಪ್ ಹೇಳಿದ್ದಾರೆ.