2026-06-25 02:09:21

Retired ISRO employee strangles wife to death | ಪತ್ನಿ ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ | Speed News kannada

Retired ISRO employee strangles wife to death | ಪತ್ನಿ ಉಸಿರುಗಟ್ಟಿಸಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ | Speed News kannada

ಬೆಂಗಳೂರು: 65 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಇಂದು ತಮ್ಮ ಪತ್ನಿಯನ್ನು ಉಸಿರುಗಟ್ಟಿಸಿ  ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. 65 ವರ್ಷದ ನಿವೃತ್ತ ಇಸ್ರೋ ಉದ್ಯೋಗಿ ಆರೋಪಿ ನಾಗೇಶ್ವರ ರಾವ್  ಕೊಲೆ ಆರೋಪಿ.  ಪೊಲೀಸರು ಇವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾವ್ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆವಲಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ರಾವ್‌ ದಂಪತಿ ವಾಸಿಸುತ್ತಿದ್ದರು.  ನಾನು ಮೃತಪಟ್ಟರೆ ಪತ್ನಿಯನ್ನು ನೋಡಿಕೊಳ್ಳುವವರು ಯಾರೂ ಇಲ್ಲ ಆಕೆಯ ಮುಂದಿನ ಜೀವನಕ್ಕೆ ಕಷ್ಟವಾಗುತ್ತದೆ ಎಂದು ಈ ಕೃತ್ಯ ನಡೆಸಿದ್ದಾಗಿ ಅವರು ಹೇಳುತ್ತಿದ್ದಾರೆ.
 ದಂಪತಿಯ ಪುತ್ರಿ ಅಮೆರಿಕದಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.