2026-06-08 04:05:00

Riots near US embassy in Karachi 8 dead | ಕರಾಚಿಯಲ್ಲಿನ ಯುಎಸ್ ರಾಯಭಾರ ಕಚೇರಿ ಬಳಿ ಗಲಭೆ, 8 ಮಂದಿ ಸಾ*ವು | Speed News Kannada

Riots near US embassy in Karachi 8 dead | ಕರಾಚಿಯಲ್ಲಿನ ಯುಎಸ್ ರಾಯಭಾರ ಕಚೇರಿ ಬಳಿ ಗಲಭೆ, 8 ಮಂದಿ ಸಾ*ವು | Speed News Kannada

ಕರಾಚಿ : ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಯನ್ನು ಖಂಡಿಸಿ ಪಾಕಿಸ್ತಾನದ ಮೆಗಾಸಿಟಿ ಕರಾಚಿಯಲ್ಲಿರುವ ಅಮೆರಿಕದ ದೂತಾವಾಸ ಕಚೇರಿಯ  ಹೊರಗೆ ಇಂದು (ಮಾ.2) ಇರಾನ್ ಪರ ಬೃಹತ್ ಪ್ರತಿಭಟನೆ ನಡೆದಿದ್ದು ಹಿಂಸಾಸ್ವರೂಪಕ್ಕೆ ತಿರುಗಿದ್ದು, ಈ ವೇಳೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ, ನಾವು ಕನಿಷ್ಠ ಎಂಟು ಶವಗಳನ್ನು ಕರಾಚಿಯ ನಾಗರಿಕ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದೇವೆ, ಕಾನ್ಸುಲೇಟ್ ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಎಧಿ ಫೌಂಡೇಶನ್ ರಕ್ಷಣಾ ಸೇವೆಯ ವಕ್ತಾರ ಮುಹಮ್ಮದ್ ಅಮೀನ್ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ.
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ನೂರಾರು ಇರಾನ್ ಪರ ಪ್ರತಿಭಟನಾಕಾರರು ದೂತಾವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು.ಯುವಕರ ಗುಂಪೊಂದು ಮುಖ್ಯ ದ್ವಾರವನ್ನು ಹತ್ತಿ ಕಾನ್ಸುಲರ್ ಕಟ್ಟಡದ ಡ್ರೈವ್‌ವೇಗೆ ನುಗ್ಗಿ ದಾಂಧಲೆ ಸೃಷ್ಟಿಸಿದ್ದರು. ಈ ವೇಳೆ ಗಲಭೆ ನಿಯಂತ್ರಿಸಲು ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಎಂಟು ಜನ ಮೃತಪಟ್ಟಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.