2026-05-03 12:44:29

Rishab Shetty film that has entered the Telugu arena|ತೆಲುಗು ಅಂಗಳಕ್ಕೆ ಲಗ್ಗೆ ಇಟ್ಟ ರಿಷಬ್ ಶೆಟ್ಟಿ ಸಿನಿಮಾ|Speed News Kannada

Rishab Shetty film that has entered the Telugu arena|ತೆಲುಗು ಅಂಗಳಕ್ಕೆ ಲಗ್ಗೆ ಇಟ್ಟ ರಿಷಬ್ ಶೆಟ್ಟಿ ಸಿನಿಮಾ|Speed News Kannada

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕನ್ನಡಿಗರ ಕೀರ್ತಿ ಪತಾಕೆ ಹಾರಿಸಿರುವ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ಅವರ ಹಳೆಯ ಸಿನಿಮಾ ಈಗ ಹೊಸ ರೂಪದಲ್ಲಿ ತೆರೆಗೆ ಬರಲು ಸಜ್ಜಾಗಿದೆ. 'ಕಾಂತಾರ'ದ ನಂತರ ಇಡೀ ದೇಶವೇ ರಿಷಬ್ ಸಿನಿಮಾಗಳಿಗಾಗಿ ಕಾಯುತ್ತಿರುವ ಹೊತ್ತಿನಲ್ಲೇ, ಅವರು ನಟಿಸಿದ್ದ 'ಹರಿಕಥೆ ಅಲ್ಲ ಗಿರಿಕಥೆ' ಸಿನಿಮಾ ಇದೀಗ ತೆಲುಗಿಗೆ ಡಬ್ ಆಗಿ ಬಿಡುಗಡೆಗೆ ಸಿದ್ಧವಾಗಿದೆ.'ಜೈ ಹನುಮಾನ್' ಸಿನಿಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾಗಿರುವ ರಿಷಬ್ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ.

ಈ ಹಿಂದೆ ಕನ್ನಡದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ಈ ಸಿನಿಮಾ ತೆಲುಗು ಪ್ರೇಕ್ಷಕರನ್ನು ಹೇಗೆ ರಂಜಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.ಕರಣ್ ಆನಂದ್ ಮತ್ತು ಅನಿರುದ್ಧ ಮಹೇಶ್ ನಿರ್ದೇಶನದ ಈ ಸಿನಿಮಾ ಮೇ 8ರಂದು ಆಂಧ್ರಪ್ರದೇಶ ಹಾಗೂ ತೆಲಂಗಾಣದಾದ್ಯಂತ ಬಿಡುಗಡೆಯಾಗುತ್ತಿದೆ. ಸದ್ಯ ಬಿಡುಗಡೆಯಾಗಿರುವ ಟ್ರೇಲರ್ ಸಿನಿಪ್ರಿಯರ ಗಮನ ಸೆಳೆಯುತ್ತಿದ್ದು, ರಿಷಬ್ ಶೆಟ್ಟಿ ಕ್ರೇಜ್ ತೆಲುಗು ರಾಜ್ಯಗಳಲ್ಲಿಯೂ ಕೆಲಸ ಮಾಡಲಿದೆಯೇ ಎಂದು ಕಾದು ನೋಡಬೇಕಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.