2026-04-23 11:00:52

Royal Challengers to play in green jersey | ಇಂದು ಗ್ರೀನ್‌ ಜೆರ್ಸಿಯಲ್ಲಿ ಆಡಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು | Speed news kannada |

Royal Challengers to play in green jersey | ಇಂದು ಗ್ರೀನ್‌ ಜೆರ್ಸಿಯಲ್ಲಿ ಆಡಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು | Speed news kannada |

ಇಂಡಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​​​ಸಿಬಿ ಆಟಗಾರರು ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಪ್ರತಿ ವರ್ಷ ಒಂದು ಪಂದ್ಯದಲ್ಲಿ ಆರ್‌ಸಿಬಿ ತನ್ನ ಸಾಂಪ್ರದಾಯಿಕ ಬಣ್ಣವನ್ನು ಬದಿಗಿಟ್ಟು ‘ಹಸಿರು’ ಉಡುಗೆಯಲ್ಲಿ ಕಣಕ್ಕಿಳಿಯುತ್ತದೆ. ಇದರ ಉದ್ದೇಶವೇನೆಂದರೆ 2011ರಿಂದ ಆರ್‌ಸಿಬಿ ಆರಂಭಿಸಿದ ಈ ‘ಗೊ ಗ್ರೀನ್’ (Go Green) ಅಭಿಯಾನವು ಪರಿಸರ ಸಂರಕ್ಷಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ. ಈ ಜೆರ್ಸಿಯು ಕೇವಲ ಬಣ್ಣದಿಂದ ಮಾತ್ರ ಹಸಿರಲ್ಲ, ಅದರ ತಯಾರಿಕೆಯಲ್ಲೂ ಪರಿಸರ ಸ್ನೇಹಿ ತಂತ್ರಜ್ಞಾನ ಅಡಗಿದೆ. ಆದ್ರೆ ಈ ಬಾರಿ ಆಡಲಿರುವ ಆರ್‌ಸಿಬಿಯು ಹಸಿರು ಜೆರ್ಸಿಯನ್ನು ಮೈದಾನ ಮತ್ತು ಸುತ್ತಮುತ್ತ ಸಂಗ್ರಹಿಸಲಾದ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಹಳೆಯ ಬಟ್ಟೆಗಳನ್ನು ಮರುಬಳಕೆಮಾಡಿ ತಯಾರಿಸಲಾಗಿದೆ. ಇದು ‘ತ್ಯಾಜ್ಯದಿಂದ ಸಂಪತ್ತು’ ಎಂಬ ಸಂದೇಶ ಸಾರುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.