2026-03-07 03:04:55

rs 2 per litre milk to support farmers cm SpeedNewsKannada

rs 2 per litre milk to support farmers cm SpeedNewsKannada

ಬೆಂಗಳೂರು: ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ ರೂ.5 ರಿಂದ ರೂ. 7ಕ್ಕೆ ಹೆಚ್ಚಿಸುವ ಸಾಧ್ಯತಗಳಿವೆ. ಈ ಸಂಬಂಧ ಈ ಬಾರಿಯ ಬಜೆಟ್‌ ನಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೋತ್ಸಾಹಧನ ಏರಿಸುವುದಾಗಿ ಪ್ರಕಟಿಸಿದ್ದರು. ಆದರೆ ಇದುವರೆಗೂ ಈ ನಿರ್ಧಾರ ಜಾರಿಯಾಗಿರಲಿಲ್ಲ. ಅಧಿಕೃತವಾಗಿ ಬಜೆಟ್ ಮೂಲಕವೇ ಪ್ರಕಟಿಸಿ ಜಾರಿಗೊಳಿಸುವ ಉದ್ದೇಶ ಇದೆ ಎಂದು ತಿಳಿದು ಬಂದಿದೆ.
ವರ್ಷದಿಂದ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಪ್ರಮಾಣ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ 1 ಕೋಟಿ ಲೀಟರ್ ಹಾಲನ್ನು ಕೆಎಂಎಫ್‌ ಸಂಗ್ರಹ ಮಾಡುತ್ತಿದ್ದು, ಪ್ರೋತ್ಸಾಹಧನವನ್ನು ಹೆಚ್ಚಿಸುವ ಮೂಲಕ ಹಾಲಿನ ಉತ್ಪಾದನೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ.
ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ರೂ.3 ಏರಿಕೆ ಮಾಡಿ ಸಹಾಯಧನವನ್ನೂ ಹೆಚ್ಚಿಸಿದ್ದೇವೆ. ಈ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ವರ್ಗ ಮಾಡಲಾಗುತ್ತಿದೆ. ಮೇವಿನ ದರ, ಪಶು ಆಹಾರ ಸಹಿತ ಮತ್ತಿತರೆ ಉತ್ಪನ್ನಗಳ ದರ ಏರಿಕೆಯಿಂದ ಪ್ರೋತ್ಸಾಹಧನ ಹೆಚ್ಚಿಸುವ ಬೇಡಿಕೆ ಇದೆ. ಈ ಹಿಂದೆ ನಾವೇ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರೋತ್ಸಾಹಧನವನ್ನು ರೂ. 7  ಹೆಚ್ಚಳ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.