2026-06-08 04:32:50

Rs 410 crore GST scam in Bengaluru | ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ | Speed news kannada

Rs 410 crore GST scam in Bengaluru | ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ | Speed news kannada

ದೇಶಾದ್ಯಂತ ಸೈಬರ್​​ ಕ್ರೈಂ ಜಾಲಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್‌ ಜಾಲಕ್ಕೆ ಸಿಲುಕಿ  ಸಾವಿರಾರೂ ಜನ  ತಮ್ಮ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ ಕ್ರೈಂ ಹಲವು ಪ್ರಕರಣಗಳ ಪೈಕಿ ಇದೀಗ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಿದ್ದಾರೆ. ಕೋಟಿ ಕೋಟಿ ವಂಚನೆ ಜಾಲದ ಪ್ರಮುಖ ಸೂತ್ರಧಾರಿ ಆಂಧ್ರಪ್ರದೇಶದ ಚಿತ್ತೂರು ಮೂಲದ ತೌಕಿರ್‌ ಅಲಿಯಾಸ್‌ ಮೊಹಮ್ಮದ್‌. ಅಮಾಯಕ ಜನರ ಪಾನ್ (PAN) ಮತ್ತು ಆಧಾರ್ ಕಾರ್ಡ್‌ಗಳನ್ನು ಅಕ್ರಮವಾಗಿ ಬಳಸಿ ಹಲವು ನಕಲಿ ಕಂಪನಿಗಳನ್ನು ನೋಂದಣಿ ಮಾಡಿಕೊಳ್ಳುತ್ತಿದ್ದರು. ಯಾವುದೇ ಸರಕು ಅಥವಾ ಸೇವೆಗಳನ್ನು ಸರಬರಾಜು ಮಾಡದೆಯೇ, ಕೇವಲ ಸಿಮೆಂಟ್, ಕಬ್ಬಿಣದ ಸರಳುಗಳ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು (Fake Invoices) ಸೃಷ್ಟಿಸಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯುತ್ತಿದ್ದರು. ಸರ್ಕಾರಕ್ಕೆ ಬರಬೇಕಿದ್ದ 102.5 ಕೋಟಿ ರೂಪಾಯಿಗಳ ತೆರಿಗೆ ಹಣವನ್ನು  ಮೋಸ ಮಾಡಿದ ತೌಕೀರ್‌ನನ್ನು ಪೊಲೀಸರು ಬಂಧಿಸಿದ್ದು, ಆರ್ಥಿಕ ಅಪರಾಧಗಳ  ಮೇಲೆ  14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ಕೋರ್ಟ್‌ ವಿಧಿಸಿದೆ. ಇನ್ನೊಬ್ಬ ಆರೋಪಿಯಾದ ಶೇಕ್ ಜಾಕೀರ್ ಹುಸೇನ್ ಅಲಿಯಾಸ್ ಬಾಷಾ ಎಂಬಾತ ವಿದೇಶಕ್ಕೆ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.