2026-06-08 01:30:31

Rs. 5065 crore spent on Bangalore road development | ಬೆಂಗಳೂರು ರಸ್ತೆ ಅಭಿವೃದ್ಧಿಗೆ ರೂ.5065 ಕೋಟಿ ವೆಚ್ಚ ಡಿ ಕೆ ಶಿವಕುಮಾರ್ | Speed News Kannada

Rs. 5065 crore spent on Bangalore road development | ಬೆಂಗಳೂರು ರಸ್ತೆ ಅಭಿವೃದ್ಧಿಗೆ ರೂ.5065 ಕೋಟಿ ವೆಚ್ಚ ಡಿ ಕೆ ಶಿವಕುಮಾರ್ | Speed News Kannada

ಬೆಂಗಳೂರು: ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ನಮ್ಮ ಸರ್ಕಾರ ರೂ.5,065 ಕೋಟಿ ವೆಚ್ಚ ಮಾಡುತ್ತಿದ್ದು, ಮುಖ್ಯಮಂತ್ರಿಗಳು 2 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಶೇ. 75ರಷ್ಟು ಕಾಮಗಾರಿಗಳು ಮುಕ್ತಾಯವಾಗಿದ್ದು, ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು. 
ಶೀಘ್ರದಲ್ಲೇ10 ಲಕ್ಷ ಇ ಖಾತಾ ದಾಖಲೆ ವಿತರಣೆ ಕಾರ್ಯಕ್ರಮ ಮಾಡಲಾಗುತ್ತದೆ. ಇನ್ನು 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ಅವರ ವ್ಯಾಪಾರಕ್ಕೆ ವಾಹನ ನೀಡುವ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದೂ ತಿಳಿಸಿದರು.
ಖಾಲಿ ಹುದ್ದೆಗಳ ಭರ್ತಿಗೆ ಬಿಜೆಪಿ ಪ್ರತಿಭಟನೆಗೆ ಕಿಡಿ ಕಾರಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾಕೆ ಭರ್ತಿ ಮಾಡಲಿಲ್ಲ? ಶೀಘ್ರದಲ್ಲೇ ನಾವು ಹುದ್ದೆಗಳಿಗೆ ನೇಮಕಾತಿ ಮಾಡುತ್ತೇವೆ. ನಿರುದ್ಯೋಗಿ ಯುವಕರಿಗೆ ತೊಂದರೆ ಆಗಬಾರದೆಂದು ಯುವನಿಧಿ ಯೋಜನೆ ಜಾರಿಗೊಳಿಸಿದ್ದೇವೆ. ಒಳ ಮೀಸಲಾತಿ ಸೇರಿದಂತೆ ಅನೇಕ ಕಾರಣಗಳಿಗೆ ನೇಮಕಾತಿ ವಿಳಂಬವಾಗಿದೆ ಎಂದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.