2026-04-23 09:22:07

Sadiq Pailwan did not bother to persuade Muslim MLAs! | ಕಾಂಗ್ರೆಸ್‌ಗೆ ಬಂಡಾಯದ ಬಿಸಿ, ಮುಸ್ಲಿಂ ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್! | Speed news kannada

Sadiq Pailwan did not bother to persuade Muslim MLAs! | ಕಾಂಗ್ರೆಸ್‌ಗೆ ಬಂಡಾಯದ ಬಿಸಿ, ಮುಸ್ಲಿಂ ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್! | Speed news kannada

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಪಕ್ಷದೊಳಗಿನ ಬಂಡಾಯವೇ ಇದೀಗ ಚುನಾವಣಾ ಸಮೀಕರಣಗಳನ್ನು ಸಂಕೀರ್ಣಗೊಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕಣಕ್ಕಿಳಿದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ತೊಡೆತಟ್ಟಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ಕ್ಷಣದವರೆಗೂ ನಡೆದ ಮಾತುಕತೆಗಳಿಗೂ ಸಾದಿಕ್ ಪೈಲ್ವಾನ್ ಮಣಿಯದೇ ಕಣದಲ್ಲಿ ಮುಂದುವರಿದಿದ್ದಾರೆ.

ಈ ಮಧ್ಯೆ SDPI ಪಕ್ಷದ ಅಫ್ಸರ್ ಕೊಡ್ಲಿಪೇಟೆ ಸೇರಿದಂತೆ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ 21 ಮಂದಿ ಮುಸ್ಲಿಂ ಸಮುದಾಯದವರಾಗಿದ್ದಾರೆ. ಕ್ಷೇತ್ರದಲ್ಲಿ ಸುಮಾರು 80 ಸಾವಿರ ಮುಸ್ಲಿಂ ಮತಗಳಿರುವುದರಿಂದ, ಮತ ವಿಭಜನೆಯ ಭೀತಿ ಕಾಂಗ್ರೆಸ್ ನಾಯಕರಲ್ಲಿ ಆತಂಕ ಹುಟ್ಟಿಸಿದೆ. ಬಂಡಾಯ ತಣ್ಣಗಾಗಿಸಲು ಕಾಂಗ್ರೆಸ್ ಮುಖಂಡರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಸೇರಿದಂತೆ ಹಲವರು ಸಾದಿಕ್ ಪೈಲ್ವಾನ್ ಜೊತೆ ಮಾತುಕತೆ ನಡೆಸಿದರೂ, ಸಂಧಾನ ಯಶಸ್ವಿಯಾಗಲಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಾಮಪತ್ರ ವಾಪಸ್‌ ಪಡೆಯಲು ಇಂದು ಕೊನೆಯ ದಿನವಾಗಿದ್ದು ಸಮರ್ಥ್‌ ಸೇರಿದಂತೆ 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಂಡಾಯ, ಬಹುಮುಖ ಸ್ಪರ್ಧೆ ಮತ್ತು ಅಲ್ಪಸಂಖ್ಯಾತ ಮತಗಳ ವಿಭಜನೆ ಕಾಂಗ್ರೆಸ್‌ಗೆ ಕಠಿಣ ಪರೀಕ್ಷೆಯಾಗಿದ್ದು, ಫಲಿತಾಂಶದ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.