2026-03-18 01:38:06

Salim Khans health improves discharged from hospital | ಹಿರಿಯ ಕಥೆಗಾರ ಸಲೀಮ್ ಖಾನ್ ಆರೋಗ್ಯದಲ್ಲಿ ಸುಧಾರಣೆ ಆಸ್ಪತ್ರೆಯಿಂದ ಡಿಸ್ಚಾರ್ಜ್ | Speed News Kannada

Salim Khans health improves discharged from hospital | ಹಿರಿಯ ಕಥೆಗಾರ ಸಲೀಮ್ ಖಾನ್ ಆರೋಗ್ಯದಲ್ಲಿ ಸುಧಾರಣೆ ಆಸ್ಪತ್ರೆಯಿಂದ ಡಿಸ್ಚಾರ್ಜ್ | Speed News Kannada

ಮುಂಬೈ: ಬಾಲಿವುಡ್ ಹಿರಿಯ ಕಥೆಗಾರ ಮತ್ತು ಸಲ್ಮಾನ್ ಖಾನ್ ಅವರ ತಂದೆ ಸಲೀಮ್ ಖಾನ್ ಅವರು ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಫೆಬ್ರವರಿ 17ರಂದು ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಮಾರ್ಚ್ 17ರಂದು ಡಿಸ್ಟಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
90 ವರ್ಷದ ಸಲೀಮ್ ಖಾನ್ ಅವರ ಆರೋಗ್ಯ ಸ್ಥಿತಿ ಆತಂಕ ಮೂಡಿಸಿದ್ದರೂ, ವೈದ್ಯರ ನಿರಂತರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಅವಧಿಯಲ್ಲಿ ಕುಟುಂಬ ಸದಸ್ಯರಾದ ಅರ್ಬಾಜ್ ಖಾನ್, ಅರ್ಪಿತಾ ಖಾನ್ ಸೇರಿದಂತೆ ಇತರರು ನಿಯಮಿತವಾಗಿ ಭೇಟಿ ನೀಡುತ್ತಿದ್ದರು. ಚಿತ್ರರಂಗದಲ್ಲಿ ಜಾವೇದ್ ಅಖರ್ ಜೊತೆಗಿನ 'ಸಲೀಮ್-ಜಾವೇದ್' ಜೋಡಿ ಮೂಲಕ ಖ್ಯಾತಿ. ಗಳಿಸಿದ ಅವರು, 'ಶೋಲೆ', 'ದೀವಾರ್', 'ಡಾನ್' ಸೇರಿದಂತೆ ಹಲವು ಹಿಟ್ ಸಿನಿಮಾಗಳಿಗೆ ಕಥೆ ನೀಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.