2026-04-23 09:27:39

Salman Khan paired with Lady Superstar Nayanthara | ಸಲ್ಮಾನ್ ಖಾನ್ ಜೋಡಿಯಾಗಿ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ | Speed news kannada

Salman Khan paired with Lady Superstar Nayanthara | ಸಲ್ಮಾನ್ ಖಾನ್ ಜೋಡಿಯಾಗಿ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ | Speed news kannada

ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಒಂದೊಳ್ಳೆ ಬ್ರೇಕ್‌ಗಾಗಿ ಸರ್ಕಸ್ ಮಾಡುವಂತಾಗಿದೆ. 'ಟೈಗರ್- 3' ಒಂದು ಹಂತಕ್ಕೆ  ಸೌಂಡ್‌ ಮಾಡ್ತು.. ಆದ್ರೆ ಇತ್ತೀಚಿಗೆ  ಸಲ್ಲು ಸಿನಿಮಾಗಳು ಅಷ್ಟಾಗಿ ವರ್ಕ್ ಆಗ್ತಿಲ್ಲ. ಸತತ ಸೋಲುಗಳಿಂದ ಶಾರುಖ್ ಖಾನ್ ಚೇತರಿಸಿಕೊಂಡಿದ್ದಾರೆ. ಆದರೆ ಆಮೀರ್ ಖಾನ್, ಸಲ್ಮಾನ್ ಖಾನ್ ಸೋಲಿನ ಸುಳಿಗೆ ಸಿಲುಕಿದ್ದಾರೆ. ಆ ಸೋಲಿನ ಸುಳಿಯಿಂದ ಹೊರಬರಲು ಸರ್ಕಸ್‌ ಮಾಡ್ತಿದ್ದಾರೆ ಸಲ್ಮಾನ್‌ ಖಾನ್‌.

ಕಳೆದ ವರ್ಷ ಬಂದಿದ್ದ 'ಸಿಕಂದರ್' ಸಿನಿಮಾ ಹೀನಾಯ ಸೋಲು ಕಂಡಿತ್ತು. ಇದೀಗ 'ಮಾತೃಭೂಮಿ' ಎಂಬ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಲ್ಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಅವರ ಮತ್ತೊಂದು ಸಿನಿಮಾ ಬಗ್ಗೆ ಚರ್ಚೆ ಚರ್ಚೆಗಳು ಶುರುವಾಗಿವೆ. ಆದ್ರೆ ಈ ಬಾರಿ ಸಲ್ಮಾನ್‌ ಖಾನ್‌ ದಕ್ಷಿಣ ಚಿತ್ರರಂಗದ ನಿರ್ದೇಶಕರ ಜೊತೆ ಕೈಜೋಡಿಸಲಿದ್ದಾರೆ… ಈ ಹಿಂದೆ ತಮಿಳು ನಿರ್ದೇಶಕರ ಜೊತೆ  ವರ್ಕ್‌ ಮಾಡಿದ್ದ ಸಲ್ಲಿ ಇದೀಗ ತೆಲುಗು ನಿರ್ದೇಶಕನ ಜೊತೆ ಕೈ ಜೋಡಿಸುತ್ತಿದ್ದಾರೆ.

ಸಲ್ಮಾನ್ ಖಾನ್ ನಟನೆಯ ಮುಂದಿನ ಚಿತ್ರಕ್ಕೆ ತೆಲುಗು ನಿರ್ದೇಶಕ ವಂಶಿ ಪೈಡಿಪಲ್ಲಿ ಆಕ್ಷನ್ ಕಟ್ ಹೇಳುತ್ತಾರೆ ಎನ್ನಲಾಗ್ತಿದೆ. ಆ ಚಿತ್ರದಲ್ಲಿ ಸಲ್ಲು ಜೋಡಿಯಾಗಿ ತಮಿಳು ನಟಿ..ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ನಟಿಸುತ್ತಿದ್ದಾರಂತೆ 'ಜವಾನ್' ಚಿತ್ರದಲ್ಲಿ ಶಾರುಖ್ ಖಾನ್ ಜೊತೆ ನಟಿಸಿದ್ದ ನಯನತಾರಾ ಈಗ ಸಲ್ಮಾನ್ ಖಾನ್‌ಗೆ ಜೊತೆ ತೆರೆಹಂಚಿಕೊಳ್ಳೋದ್ರಲ್ಲಿ ಅಚ್ಚರಿ ಪಡಬೇಕಿಲ್ಲ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.