2026-04-23 09:00:08

Samrat Chaudhary takes oath as new Chief Minister of Bihar | ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರ | Speed news kannada

Samrat Chaudhary takes oath as new Chief Minister of Bihar | ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರ | Speed news kannada

ಬಿಹಾರದಲ್ಲಿ ನಿತೀಶ್‌ ಕುಮಾರ್‌ ರಾಜೀನಾಮೆ ನೀಡಿದ ಬಳಿಕ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್  ರಾಜೀನಾಮೆ ಬಳಿಕ ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಬಿಹಾರದ ನೂತನ ಮುಖ್ಯಮಂತ್ರಿಯಾಗಿ  ಅಧಿಕಾರಕ್ಕೆ ಬರಲಿರುವ ಸಾಮ್ರಾಟ್‌ ಚೌಧರಿಯವರಿಗೆ ಬಿಹಾರದ ರಾಜ್ಯಪಾಲ ಸೈಹ್ಯದ್‌ ಪ್ರತಿಜ್ಞಾವಿ ಬೋಧಿಸಿದ್ದಾರೆ. ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.