2026-07-23 08:37:33

Sangolli Rayanna statue smeared with ink | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ | Speed News Kannada

Sangolli Rayanna statue smeared with ink | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ | Speed News Kannada

ಬೆಳಗಾವಿ: ನಗರದ ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಕಳೆದ ರಾತ್ರಿ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಇದರಿಂದ ಈ ಪ್ರದೇಶದಲ್ಲಿ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಇಲ್ಲಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿ ಕಪ್ಪು ಬಣ್ಣದಲ್ಲೇ ಇತ್ತು. ಇದರ ಮೇಲೆ ಮತ್ತೆ ಕರಿ ಮಸಿ ಸುರಿದಿದ್ದಾರೆ. ಈ ವಿಷಯ ಗ್ರಾಮದ ಯುವಕರ ಗಮನಕ್ಕೆ ಬರುತ್ತಿದ್ದಂತೆ ಘೋಷಣೆ ಕೂಗಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ನಗರ ಪೊಲೀಸ್‌ ಕಮಿಷನರ್‌ ಭೂಷಣ ಬೊರಸೆ, ಡಿಸಿಪಿ ನಾರಾಯಣ ಭರಮನಿ ಅವರೂ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಸಾರ್ವಜನಿಕರು ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಪಡಿಸಿದರು.
ಸಂಗೊಳ್ಳಿ ರಾಯಣ್ಣ ಕೇವಲ ಐತಿಹಾಸಿಕ ವ್ಯಕ್ತಿಯಲ್ಲ. ನಮ್ಮ ಅಸ್ತಿತ್ವದ ಸಂಕೇತ. ಅವರ ಪ್ರತಿಮೆಗೆ ಅವಮಾನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಕನ್ನಡಪರ ಹೋರಾಟಗಾರರು ಎಸ್‌ ಪಿ ಅವರಿಗೆ ಮನವಿ ಸಲ್ಲಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.