2026-03-07 08:14:23

Satish Jarkiholis images are in the mirror of social justice | ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ ಕೆ ವಿ ಪ್ರಭಾಕರ್ | Speed News Kannada

Satish Jarkiholis images are in the mirror of social justice | ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ ಕೆ ವಿ ಪ್ರಭಾಕರ್ | Speed News Kannada

ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.  ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ  ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಯೇ ಸಾಮಾಜಿಕ ನ್ಯಾಯದ ಬಗ್ಗೆ ಸ್ಪಷ್ಟತೆ ಮತ್ತು ಖಚಿತತೆ ಸತೀಶ್ ಜಾರಕಿಹೊಳಿಯವರಿಗೆ ಇರುವ ಕಾರಣದಿಂದಲೇ ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ  ಜಾರಕಿಹೊಳಿಯವರನ್ನು ನಾವು ಸ್ಪಷ್ಟವಾಗಿ ಕಾಣಬಹುದಾಗಿದೆ.  ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಗಳ ಪಕ್ಕದಲ್ಲೇ ಜಾರಕಿಹೊಳಿಯವರ ಕೈಗಳಿವೆ ಎಂದು ನುಡಿದರು. 
ಜಾರಕಿಹೊಳಿಯವರು ಹೆಚ್ಚು ಮಾತಾಡುವುದಿಲ್ಲ, ಐವತ್ತು ಮಂದಿ ಸೇರಿರುವ ಸಭೆಯಾಗಲಿ, ಐದು ಲಕ್ಷ ಮಂದಿ ಸೇರಿರುವ ಸಭೆಯಾಗಲಿ ಐದೇ ನಿಮಿಷದಲ್ಲಿ ಮಾತು ಮುಗಿಸುತ್ತಾರೆ ಎಂದು ಬಹಳ ಮಂದಿ ನನಗೆ ಹೇಳಿದ್ದಾರೆ. ಅವರಿಗೆಲ್ಲಾ ನಾನು ಒಂದೇ ಉತ್ತರ ಕೊಡುತ್ತೇನೆ, "ದಡದಲ್ಲಿ ನಿಂತು ನೋಡುವಾಗ ಸಮುದ್ರ ಬಹಳ ಪ್ರಶಾಂತವಾಗಿ ಕಾಣುತ್ತದೆ. ಆದರೆ ಸಮುದ್ರದ ರಭಸ ಇರುವುದು ಅದರ ಆಳದಲ್ಲಿ. ಜಾರಕಿಹೊಳಿಯವರ ಮೌನದ ಆಳದಲ್ಲಿ ಅವರ ರಭಸ ಇದೆ. ಆ ರಭಸ ಅವರ ಕೆಲಸದಲ್ಲಿ ಕಾಣುತ್ತದೆ ಎಂದರು.
ಯಾವತ್ತು Easy chair politics ಗೆ ಒರಗಿಕೊಳ್ಳದ ಸತೀಶ್ ಅವರು ಬಹಳ ಕಷ್ಟವಾದ ಹಾದಿಯನ್ನೇ ಆರಿಸಿಕೊಂಡು ಅದರಲ್ಲಿ ಸಕ್ಸಸ್ ಆಗುತ್ತಾರೆ. ಇದು ಸ್ಪಷ್ಟವಾಗಿ ಮತ್ತೊಮ್ಮೆ ಗೋಚರಿಸಿದ್ದು ಶಿಗ್ಗಾಂವ್ ಉಪ ಚುನಾವಣೆಯಲ್ಲಿ. ಯಾವ ಮಾಧ್ಯಮದವರೂ ಕಲ್ಪಿಸಿಕೊಳ್ಳದ ರೀತಿಯಲ್ಲಿ ಹಲವು ಸವಾಲುಗಳ ನಡುವೆಯೂ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಂಡೇ ಬಂದರು. ಇದಕ್ಕಾಗಿ ಅವರು ಮಾಡಿದ ಕೆಲಸವನ್ನು ನಾನು ಬಹಳ ಹತ್ತಿರದಿಂದ ಗಮನಿಸಿದ್ದೇನೆ.
ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ಹೇಗೆ ಇಡೀ ಕ್ಷೇತ್ರದ ತುಂಬ ಹರಡಿ ಹೋಗಿದ್ದರು. ಅವರ ಮೂಲಕ ಹೇಗೆ ಕ್ಷೇತ್ರದ ರಾಜಕೀಯ ಚಿತ್ರಣವನ್ನು ಬದಲಿಸಿದರು ಎನ್ನುವುದು ಪ್ರತಿಯೊಬ್ಬ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೂ ಪಾಠ ಆಗುತ್ತದೆ ಎಂದು ವಿವರಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.