ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ.
2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ತಾತ್ವಿಕ ಒಪ್ಪಿಗೆ ನೀಡಿದ್ದು, ತನಿಖಾ ಸಂಸ್ಥೆ ಹಾಗೂ ಅದರ ವ್ಯಾಪ್ತಿಯ ಕುರಿತು ಅಂತಿಮ ಆದೇಶವನ್ನು ಕಾಯ್ದಿರಿಸಿದೆ.
ಸಿಬಿಐ ನ್ಯಾಯಾಲಯವು ಈ ಹಿಂದೆ ಏಕೈಕ ಆರೋಪಿಯನ್ನು ಖುಲಾಸೆಗೊಳಿಸಿತ್ತು. ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ವರ್ಷಗಳಿಂದ ಹೋರಾಡುತ್ತಿರುವ ಸಂತ್ರಸ್ತ ಕುಟುಂಬಕ್ಕೆ ಸರ್ವೋಚ್ಚ ನ್ಯಾಯಾಲಯದ ಈ ಆದೇಶವು ಹೊಸ ಭರವಸೆ ಮೂಡಿಸಿದೆ.