2026-06-25 02:38:24

School teacher sentenced to life imprisonment | ವಿಶೇಷ ಚೇತನ ಮಹಿಳೆಗೆ ಬ್ಲಾಕ್ ಮೇಲ್ ಶಾಲಾ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ | Speed News Kannada

School teacher sentenced to life imprisonment | ವಿಶೇಷ ಚೇತನ ಮಹಿಳೆಗೆ ಬ್ಲಾಕ್ ಮೇಲ್ ಶಾಲಾ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ | Speed News Kannada

ಕೊಪ್ಪಳ : ಕೊಪ್ಪಳದಲ್ಲಿ ವಿಶೇಷಚೇತನ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಕೇಸ್ ನಲ್ಲಿ ಸರ್ಕಾರಿ ಶಾಲೆ ಶಿಕ್ಷಕನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.
ಅಸಹಾಯಕ ವಿಶೇಷಚೇತನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ್ದ ಸರ್ಕಾರಿ ಶಾಲಾ ಶಿಕ್ಷಕ ಮಹಮ್ಮದ್ ಅಜರುದ್ದೀನ್‌ಗೆ ಗಂಗಾವತಿ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು. ತನಗೆ ಪರಿಚಯವಿದ್ದ ವಿಶೇಷಚೇತನ ಮಹಿಳೆಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಫುಸಲಾಯಿಸಿದ್ದನು. ಈ ಆಮಿಷವೊಡ್ಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಆ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದನು ಇದು ಪೊಲೀಸ್ ತನಿಖೆಯಲ್ಲೂ ಸಾಬೀತಾಗಿತ್ತು. ಇದೀಗ ನ್ಯಾಯಾಲಯ ಶಿಕ್ಷೆ ನೀಡಿದೆ. ವಿಶೇಷಚೇತನ ಮಹಿಳೆ ಜತೆಗಿನ ಲೈಂಗಿಕ ಸಂಪರ್ಕದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಈತ ವೈರಲ್ ಮಾಡಿದ್ದನು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.