2026-07-20 08:14:28

SELF HARMING | ವರದಕ್ಷಿಣೆ ಕಿರುಕುಳ ಮಕ್ಕಳಾಗಿಲ್ಲವೆಂಬ ಬೇಸರಕ್ಕೆ ಗೃಹಿಣಿ ನೇಣಿಗೆ ಶರಣು..! | SNK

SELF HARMING | ವರದಕ್ಷಿಣೆ ಕಿರುಕುಳ ಮಕ್ಕಳಾಗಿಲ್ಲವೆಂಬ ಬೇಸರಕ್ಕೆ ಗೃಹಿಣಿ ನೇಣಿಗೆ ಶರಣು..! | SNK

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಕುಟುಂಬಸ್ಥರು ನೀಡಿದ ಮಾನಸಿಕ ದೌರ್ಜನ್ಯಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ (Shocking) ಘಟನೆ ನಡೆದಿದೆ.

25 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ನಿವಾಸಿಯಾಗಿದ್ದ ಕಾವ್ಯ, ಮದುವೆಯಾದ ಬಳಿಕ ಪತಿ ನವೀನ್ ಜೊತೆ ನೆಲಮಂಗಲದ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು. ಮೂರು ವರ್ಷಗಳ ಹಿಂದೆ ಕುಟುಂಬದವರ ಒಪ್ಪಿಗೆಯೊಂದಿಗೆ ಇವರ ಮದುವೆ ನಡೆದಿತ್ತು.

ಘಟನಾ ಸ್ಥಳಕ್ಕೆ ಧಾವಿಸಿದ ಮಾದನಾಯಕನಹಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಹಿಳೆಯ ಪೋಷಕರು ನೀಡಿದ ದೂರಿನ ಮೇರೆಗೆ ಪತಿ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.