2026-06-08 01:26:49

senior journalist p ramaiah died cmgriefed ಹಿರಿಯ ಪತ್ರಕರ್ತ , ವಿಧಾನ ಪರಿಷತ್‌ ಮಾಜಿ ಸದಸ್ಯ ಪಿ . ರಾಮಯ್ಯ ನಿಧನ Speed News Kannada

senior journalist p ramaiah died cmgriefed ಹಿರಿಯ ಪತ್ರಕರ್ತ , ವಿಧಾನ ಪರಿಷತ್‌ ಮಾಜಿ ಸದಸ್ಯ  ಪಿ . ರಾಮಯ್ಯ ನಿಧನ Speed News Kannada

ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93 )ಅವರು ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಕಳೆದ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ ಬಾಲಜಿ ತಿಳಿಸಿದ್ದಾರೆ .
1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗು ಮೊಮ್ಮಕಳನ್ನು ಅಗಲಿದ್ದಾರೆ .
"ದಿ ಹಿಂದೂ " ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು . 
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ,ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು . ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.
ಇವರ ನಿಧನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೇಂದ್ರ ಸಚಿವರು, ಶಾಸಕರು ಮತ್ತು ವಿವಿಧ ಪಕ್ಷಗಳ ಮುಖಂಡರು ಶೋಕ ವ್ಯಕ್ತಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.