2026-06-08 01:25:27

Shivalingegowda Angry On RSS | ಲೇ ಅರೆಸ್ಸೆಸ್ಸು ಆರೆಸ್ಸೆಸ್ಸು ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ! ರೊಚ್ಚಿಗೆದ್ದ ಶಿವಲಿಂಗೇಗೌಡ! | Speed News Kannada

Shivalingegowda Angry On RSS | ಲೇ ಅರೆಸ್ಸೆಸ್ಸು ಆರೆಸ್ಸೆಸ್ಸು ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ! ರೊಚ್ಚಿಗೆದ್ದ ಶಿವಲಿಂಗೇಗೌಡ! | Speed News Kannada

ಬೆಂಗಳೂರು (ಫೆ.04): ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು ಹಿಡಿದಿದೆ.  ಸದನದ ಬಾವಿಗಿಳಿದು ಪ್ರತಿಭಟಿಸುತ್ತಿದ್ದ ಬಿಜೆಪಿ ವಿರುದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದಿದ್ದಾರೆ. ಅಧಿವೇಶನದ ವೇಳೆ ಬಿಜೆಪಿ ನಾಯಕರನ್ನ ಏಕವಚನದಲ್ಲೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಶಿವಲಿಂಗೇಗೌಡ ಅವರು ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಿದ್ರು. ನಿಮಗೆ ಏನಾದ್ರೂ ಮಾನ ಮರ್ಯಾದೆ ಇದೆಯಾ? ಇದು ಅಸೆಂಬ್ಲಿನಾ ಅಥವಾ ಡ್ಯಾನ್ಸ್ ಮಾಡೋಕೆ ಬಂದಿದ್ದೀರಾ? ಎಂದು ಶಿವಲಿಂಗೇಗೌಡ ಗುಡುಗಿದ್ದಾರೆ.
ನಾವು ಧರಣಿ ಮಾಡುತ್ತೇವೆ ಆದ್ರೆ ಈ ರೀತಿಯಾಗಿ ಮಾಡಿಲ್ಲ. ನಿಮ್ಮಂಥ ಜನರನ್ನ ನಾನು ಎಲ್ಲಿಯೂ ನೋಡಿಲ್ಲ. ಲೇ ಅರೆಸ್ಸೆಸ್ಸು.. ಆರೆಸ್ಸೆಸ್ಸು.. ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ..? ಎನ್ನುತ್ತಾ ಹಿಗ್ಗಾಮುಗ್ಗಾ ಬೈದಿದ್ದಾರೆ. ಜೆಡಿಎಸ್ಗೆ ಚೂರಿ ಹಾಕಿ ಕಾಂಗ್ರೆಸ್ ಸೇರಿದ ಶಿವಲಿಂಗೇಗೌಡ ಎಂದು ಬಿಜೆಪಿಗರು ಕೂಗಿದ್ರು. ಈ ಮಾತಿಗೆ ಮತ್ತೆ ರೊಚ್ಚಿಗೆದ್ದ ಶಿವಲಿಂಗೇಗೌಡರು. ನಿಮ್ ಅಪ್ಪ. ನಿಮ್ಮ ಅಪ್ಪನಿಗೆ ಹಾಕಿದ್ದೆ. ಮಾನ ಮಾರ್ಯಾದೆ ಇದೆಯಾ ಅಯೋಗ್ಯರ ಎಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.