2026-03-07 01:56:42

Shivamogga Airport Gets a Great Name | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಸಚಿವ ಪ್ರಹ್ಲಾದ ಜೋಷಿ ಸಂಸದ ರಾಘವೇಂದ್ರ ಚರ್ಚೆ | Speed News Kannada

Shivamogga Airport Gets a Great Name | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಸಚಿವ ಪ್ರಹ್ಲಾದ ಜೋಷಿ ಸಂಸದ ರಾಘವೇಂದ್ರ ಚರ್ಚೆ | Speed News Kannada

ನವದೆಹಲಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮುನ್ನಡೆಸಿದ್ದರು. ಈ ವಿಷಯಕ್ಕೆ ಅಗತ್ಯವಾದ ಬೆಂಬಲ ನೀಡುವಂತೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಲುಪುವಂತೆ ಕ್ರಮ ಕೈಗೊಳ್ಳುವ ಕುರಿತು ಸಚಿವರಿಗೆ ಮನವಿ ಮಾಡಿದರು. 
ರಾಷ್ಟ್ರಕವಿ ಕುವೆಂಪು ಅವರ ಜನ್ಮಭೂಮಿಯಾದ ಶಿವಮೊಗ್ಗಕ್ಕೆ ಅವರ ಸಾಹಿತ್ಯ ಸಾಧನೆ ಮತ್ತು ಕನ್ನಡದ ಸಾಂಸ್ಕೃತಿಕ ಪರಂಪರೆಯ ಮೇಲಿನ ಅಪಾರ ಕೊಡುಗೆ ಹೆಮ್ಮೆಯ ವಿಷಯವಾಗಿದೆ. ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡುವುದು ನಾಡಿನ ಮಹಾನ್ ವ್ಯಕ್ತಿಗೆ ಸಲ್ಲಿಸುವ ಬಹಳ ದೊಡ್ಡ ಗೌರವವಾಗುತ್ತದೆ ಎಂದು ರಾಘವೇಂದ್ರ ಅವರು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.