2026-06-25 02:05:54

Shivamogga shocked | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ ಬೆಚ್ಚಿಬಿದ್ದ ಶಿವಮೊಗ್ಗ | Speed News Kannada

Shivamogga shocked | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ ಬೆಚ್ಚಿಬಿದ್ದ ಶಿವಮೊಗ್ಗ | Speed News Kannada

ಶಿವಮೊಗ್ಗ : ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ (Crime) ಮಾಡಿರುವ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಹೊಸಮನೆ ಬಡಾವಣೆ 6ನೇ ತಿರುವಿನ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.
ಶ್ರೀನಿವಾಸ್‌ ಗಾರೆ ಕೆಲಸ ಮಾಡುತ್ತಿದ್ದನು. ಗಾಜನೂರಿನಲ್ಲೂ ಗಾರೆ ಕೆಲಸಕ್ಕೆ ತೆರಳಿದ್ದ ಆತ ಕಳೆದ ಮೂರು ದಿನಗಳಿಂದ ಅಲ್ಲಿಯೇ ವಾಸವಾಗಿದ್ದನು. ನಿನ್ನೆ ರಾತ್ರಿ ಗಾಜನೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಪಕ್ಕದಲ್ಲಿ ಆತ ಇನ್ನೋರ್ವ ವ್ಯಕ್ತಿಯ ಜೊತೆ ಮದ್ಯಪಾನ ಮಾಡುತ್ತ ಕುಳಿತಿದ್ದುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೊಲೆಯ ಕಾರಣ ಸ್ಪಷ್ಟವಿಲ್ಲ ಯಾವ ಕಾರಣಕ್ಕೆ ಈ ಹತ್ಯೆ ನಡೆದಿದೆ ಹಾಗೂ ಕೊಲೆ ಮಾಡಿದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಹುಡುಗಿ ಮುಖಕ್ಕೆ ಗುಂಡಿಕ್ಕಿದ ಪ್ರೇಯಸಿ!
ಶಿವಾಜಿನಗರ ಪ್ರದೇಶದಲ್ಲಿ ಪ್ರೇಮ ತ್ರಿಕೋನಕ್ಕೆ ಸಂಬಂಧಿಸಿದ ಭೀಕರ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು ಮುಖಕ್ಕೆ ಸಮೀಪದಿಂದ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ಮಧ್ಯಾಹ್ನ ಸಾರ್ವಜನಿಕ ರಸ್ತೆಯಲ್ಲೇ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಯುವತಿಯನ್ನು ಇನ್ನೊಬ್ಬ ಮಹಿಳೆ ಭೇಟಿಗೆ ಕರೆಸಿಕೊಂಡಿದ್ದಳು. ಭೇಟಿಯ ವೇಳೆ ಇಬ್ಬರ ಮಧ್ಯೆ ಜಗಳ ಉಂಟಾಗಿ, ಆರೋಪಿಯಾಗಿರುವ ಮಹಿಳೆ ಸಮೀಪದಿಂದಲೇ ಗುಂಡಿಕ್ಕಿದ್ದಾಳೆ. ಗುಂಡು ಯುವತಿಯ ಗಲ್ಲದ ಮೂಲಕ ಒಳನುಗ್ಗಿ ತಲೆಯೊಳಗೆ ಸಿಲುಕಿದ್ದು, ತೀವ್ರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಳು ಎಂದು ತಿಳಿದುಬಂದಿದೆ.ಈ ಪ್ರಕರಣವು ಪ್ರೇಮ ಸಂಬಂಧದ ತಕರಾರಿನಿಂದ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ನಡೆದ 12 ಗಂಟೆಗಳೊಳಗೆ ಮುಖ್ಯ ಆರೋಪಿಯಾದ 25 ವರ್ಷದ ಮಹಿಳೆ ಹಾಗೂ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮೃತ ಯುವತಿಯನ್‌ಉ ಶಿಫಾ ಶೇಕ್ ಎ(19) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, ತ್ರಿಕೋಣ ಪ್ರೇಮದ ಕತೆ ತನಿಖೆಯ ವೇಳೆ ಹೊರಬಿದ್ದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.