2026-06-08 03:55:24

Shivamogga SSLC student murder | ಶಿವಮೊಗ್ಗ SSLC ವಿದ್ಯಾರ್ಥಿ ಕೊಲೆ ದುಷ್ಕರ್ಮಿಗಳಿಗೆ ಶಿಕ್ಷೆ ನೀಡಲು ವಿಜಯೇಂದ್ರ ಆಗ್ರಹ | Speed News Kannada

Shivamogga SSLC student murder | ಶಿವಮೊಗ್ಗ SSLC ವಿದ್ಯಾರ್ಥಿ ಕೊಲೆ ದುಷ್ಕರ್ಮಿಗಳಿಗೆ ಶಿಕ್ಷೆ ನೀಡಲು ವಿಜಯೇಂದ್ರ ಆಗ್ರಹ | Speed News Kannada

ಬೆಂಗಳೂರು: ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ! ಇದು ಕೇವಲ ಒಂದು ಕೊಲೆಯಲ್ಲ; ರಾಜ್ಯದ ಕಾನೂನು ಸುವ್ಯವಸ್ಥೆಯ ದುರಂತಮಯ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಶಾಲೆಗೆ ಹೋಗುವ ಬಾಲಕನನ್ನು, ಅನ್ಯ ಕೋಮಿನ ಗೂಂಡಾಗಳು, ಗಾಂಜಾ ಮತ್ತಿನಲ್ಲಿ, ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿ ಕೊಲೆಮಾಡಲಾಗಿದೆ ಎಂದು ಶಂಕಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಶಾಸಕ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಈ ಘಟನೆ ನಿಜಕ್ಕೂ ಆತಂಕಕಾರಿಯಾಗಿದೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಪಿಡುಗಿನ ಬಗ್ಗೆ ಜನರು ಮೇಲಿಂದ ಮೇಲೆ ದೂರು ನೀಡಿದ್ದರೂ, ಮುಂಜಾಗ್ರತೆ ವಹಿಸಿಲ್ಲ, ಅಗತ್ಯ ಕ್ರಮ ಕೈಗೊಳ್ಳಲಿಲ್ಲ ಅಂದ್ರೆ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ತೋರುತ್ತದೆ. ಒಬ್ಬ ಮುಗ್ಧ ಅಮಾಯಕ ಬಾಲಕನ ಸಾವಿಗೆ ಈ ರಾಜ್ಯ  ಸರ್ಕಾರವೇ ನೇರ ಹೊಣೆ! ಮೊದಲು ತಪ್ಪಿತಸ್ಥ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು, ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 ಜನರ ತಾಳ್ಮೆಗೂ ಒಂದು ಮಿತಿ ಇದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಸ್ಥಾಪಿಸಲಿ ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ, ಸರ್ಕಾರದಿಂದರೂ. 10 ಲಕ್ಷ, ಶಿಕ್ಷಣ ಇಲಾಖೆಯಿಂದರೂ. 5 ಲಕ್ಷ ಸೇರಿಸಿ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಒಟ್ಟು ರೂ.15ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.