2026-06-08 12:36:46

Shock to India smartphone market | ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಶಾಕ್ | Speed news kannada

Shock to India smartphone market | ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಶಾಕ್ | Speed news kannada

ಕೌಂಟರ್‌ಪಾಯಿಂಟ್ ರಿಸರ್ಚ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ  ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 3 ರಷ್ಟು ಕುಸಿದಿದೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಮಾರಾಟದ ಪ್ರಮಾಣವಾಗಿದೆ ಎಂದು ವರದಿ ತಿಳಿಸಿದೆ. ಕೌಂಟರ್​ಪಾಯಿಂಟ್ ರಿಸರ್ಚ್​ನ ಸಂಶೋಧನಾ ನಿರ್ದೇಶಕ ತರುಣ್ ಪಾಠಕ್ ಅವರ ಪ್ರಕಾರ, ಮುಂದಿನ ದಿನಗಳಲ್ಲಿಯೂ ಮಾರುಕಟ್ಟೆ ಒತ್ತಡಕ್ಕೆ ಒಳಗಾಗಲಿದೆ. 2026ರ ಎರಡನೇ ತ್ರೈಮಾಸಿಕದಲ್ಲಿ ಸ್ಮಾರ್ಟ್‌ಫೋನ್ ಮಾರಾಟವು ಎರಡಂಕಿ (double-digit) ಕುಸಿತವನ್ನು ಕಾಣುವ ಸಾಧ್ಯತೆಯಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.