2026-07-23 12:21:12

Shooting at Trump dinner party, Trump safe from attack | ಟ್ರಂಪ್‌ ಭಾಗವಹಿಸಿದ್ದ ಔತಣಕೂಟದಲ್ಲಿ ಗುಂಡಿನ ದಾಳಿ, ದಾಳಿಯಿಂದ ಟ್ರಂಪ್‌ ಸೇಫ್‌ | Speed news kannada

Shooting at Trump dinner party, Trump safe from attack | ಟ್ರಂಪ್‌ ಭಾಗವಹಿಸಿದ್ದ ಔತಣಕೂಟದಲ್ಲಿ ಗುಂಡಿನ ದಾಳಿ, ದಾಳಿಯಿಂದ ಟ್ರಂಪ್‌ ಸೇಫ್‌ | Speed news kannada

ಅಮೆರಿಕದ ಆಡಳಿತ ಶಕ್ತಿಕೇಂದ್ರವಾದ ವೈಟ್ ಹೌಸ್‌ನಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದೆ. ನಿನ್ನೆ ಶನಿವಾರ ರಾತ್ರಿ ವೈಟ್ ಹೌಸ್ ವರದಿಗಾರರ ವಾರ್ಷಿಕ ಔತಣಕೂಟ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ಕೇಳಿಬಂದಿದೆ. ಏಕಾಏಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನದಾಳಿಯನ್ನು ನಡೆಸಲಾಗಿತ್ತು ಎಂಬ ಅನುಮಾನಗಳು ಮೂಡಿದ್ದು, ಟ್ರಂಪ್‌ ಅವರನ್ನು  ಸುರಕ್ಷಿತವಾಗಿ ಅಧಿಕಾರಿಗಳು ಸ್ಥಳಾಂತರಿಸಿಲಾಗಿದೆ

ಅಮೆರಿಕದ ಇತರ ಪ್ರಮುಖ ನಾಯಕರನ್ನು ಕೂಡ ಸ್ಥಳಾಂತರಿಸಲಾಯಿತು. ತಕ್ಷಣಕ್ಕೆ ಯಾವುದೇ ಸಾವು ನೋವುಗಳಾದ ವರದಿಯಾಗಿಲ್ಲ, ಒಬ್ಬ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿ ಗುಂಡಿನ ದಾಳಿ ನಡೆದಿರುವುದಾಗಿ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಮತ್ತು ಇತರ ಅತಿಥಿಗಳು ಕುಳಿತಿದ್ದ ಬಾಲ್‌ರೂಮ್‌ನ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ನಿಖರವಾಗಿ ಏನಾಯಿತು ಎಂಬುದು ತಕ್ಷಣ ಸ್ಪಷ್ಟವಾಗಿಲ್ಲ.

ಗುಂಡಿನದಾಳಿ ನಡೆಯುತ್ತಿದ್ದಂತೆ ಡೊನಾಲ್ಡ್‌ ಟ್ರಂಪ್‌ ಅವರನ್ನು ಕೂಡಲೇ ಅಧಿಕಾರಿಗಳು  ಬಂಕರ್‌ನತ್ತ ಕರೆದೊಯ್ದಿದ್ದಾರೆ. ಏಕಾಏಕಿ ದಾರಿ ಬಿಡಿ, ಸರ್ ಎಂದು ಯಾರೋ ಕೂಗಿದರು. ಇತರರು ಅಡಗಿ ಕುಳಿತುಕೊಳ್ಳಿ ಎಂದು ಎಚ್ಚರಿಸಿದರು. ಒಂದು ಮೂಲೆಯಿಂದ ಗಾಡ್ ಬ್ಲೆಸ್ ಅಮೆರಿಕಾ ಎಂಬ ಘೋಷಣೆ ಕೇಳಿಬಂದಿತು, ಈ ವೇಳೆ ಡೊನಾಲ್ಡ್ ಟ್ರಂಪ್ ಅವರನ್ನು ವೇದಿಕೆಯಿಂದ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ಅವರು ಕ್ಷಣಿಕವಾಗಿ ಜಾರಿಬಿದ್ದು, ಬಳಿಕ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಯ ಸಹಾಯದಿಂದ ಎದ್ದರು. ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆಡಿ ವ್ಯಾನ್ಸ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಸೇರಿದಂತೆ ಡೊನಾಲ್ಡ್ ಟ್ರಂಪ್ ಆಡಳಿತದ ಅನೇಕ ನಾಯಕರು ಭಾಗವಹಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.