2026-03-07 06:14:51

Shortage of medicines in hospitals | ಆಸ್ಪತ್ರೆಗಳಿಗೆ ಔಷಧಿ ಕೊರತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ ಅಶೋಕ ವಾಗ್ದಾಳಿ | Speed News Kannada

Shortage of medicines in hospitals | ಆಸ್ಪತ್ರೆಗಳಿಗೆ ಔಷಧಿ ಕೊರತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ ಅಶೋಕ ವಾಗ್ದಾಳಿ | Speed News Kannada

ಬೆಂಗಳೂರು: ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ. ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಇದು ರಾಜ್ಯ ಸರ್ಕಾರದ ಆಡಳಿತದ ವೈಖರಿ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ ವಾಗ್ದಾಳಿ ನಡೆಸಿದ್ದಾರೆ. 
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು, ಸ್ವಾಮಿ ಸಿಎಂ @siddaramaiah ನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ ಎಂದು ಚೀಟಿ ಬರೆದುಕೊಟ್ಟು ಹೊರಗಡೆ ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಅಂದರೆ ಅವರು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.
ಬಡವರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದು ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಿಮೋಲ್ ನಂತಹ ಸಾಮಾನ್ಯ ಜ್ವರದ ಔಷಧಿಯೂ ಸಿಗದಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದೀರಲ್ಲ, ನಾಚಿಕೆ ಆಗಬೇಕು ನಿಮ್ಮ @INCKarnataka ಸರ್ಕಾರಕ್ಕೆ.
ನಿಮ್ಮ ಸರ್ಕಾರದಲ್ಲಿ ಯಾವುದಾದರೂ ಒಂದು ಇಲಾಖೆಯಾದರೂ ನೆಟ್ಟಗೆ ಕೆಲಸ ಮಾಡುತ್ತಿದೆಯಾ? ಒಬ್ಬ ಸಚಿವರಾದರೂ ನೆಟ್ಟಗೆ ಕೆಲಸ ಮಾಡುತ್ತಿದ್ದಾರಾ? ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ ಎಂದು ಟೀಕಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.