2026-06-25 02:01:08

shringeri; ballot paper tampering, fir against mla jeevaraj and 3 others| ಶೃಂಗೇರಿ; ಮತಪತ್ರ ತಿರುಚಿದ ಆರೋಪ: ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ ಐಆರ್‌ |Speed News Kannada

shringeri; ballot paper tampering, fir against mla jeevaraj and 3 others| ಶೃಂಗೇರಿ; ಮತಪತ್ರ ತಿರುಚಿದ ಆರೋಪ: ಶಾಸಕ  ಜೀವರಾಜ್ ಸೇರಿ ಮೂವರ ವಿರುದ್ಧ ಎಫ್‌ ಐಆರ್‌ |Speed News Kannada

ಚಿಕ್ಕಮಗಳೂರು: ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಂಚೆ ಮತಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಡಿ.ಎನ್.‌ ಜೀವರಾಜ್ ಸೇರಿ ಮೂವರ ವಿರುದ್ಧ ದೂರು ಸಲ್ಲಿಸಲಾಗಿದೆ.

ಕಾಂಗ್ರೆಸ್‌ ಮುಖಂಡ, ವಕೀಲ, ಸುಧೀರ್ ಕುಮಾರ್ ಮುರೋಳ್ಳಿ ಅವರು ದೂರು ನೀಡಿದ್ದು, ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ

ಆರೋಪಗಳೇನು?

ಮತಪತ್ರಗಳನ್ನು ಇರಿಸಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ತೆರೆದುಕೊಂಡಿದ್ದು, ಲಾಕ್ ಅನ್ನು ಕತ್ತರಿಸಲಾಗಿತ್ತು. ಹೀಗಾಗಿ ಮತಪತ್ರಗಳನ್ನು ಹಾಳು ಮಾಡಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

2023 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ಆಯ್ಕೆಯಾಗಿದ್ದರು. ಬಿಜೆಪಿಯ ಜೀವರಾಜ್ 58970 ಮತ ಗಳಿಸಿದ್ದರು. ಗೆಲುವಿನ ಅಂತರ 201 ಮತಗಳು ಮಾತ್ರ. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತ ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು.  279 ಮತಗಳನ್ನು ತಿರಸ್ಕರಿಸಲಾಗಿತ್ತು.

ಜೀವರಾಜ್ ಪರ ಚುನಾವಣಾ ಏಜೆಂಟರು ಮರು ಎಣಿಕೆ ಕೋರಿದರು. ಈ ಕೋರಿಕೆಯನ್ನು ತಿರಸ್ಕರಿಸಿದ ಚುನಾವಣಾಧಿಕಾರಿ ರಾಜೇಗೌಡ ವಿಜೇತ ಅಭ್ಯರ್ಥಿ ಎಂದು ಘೋಷಿಸಿದ್ದರು.

ನಂತರ ಜೀವರಾಜ್ ಹೈಕೋರ್ಟ್‌ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅಂತಿಮವಾಗಿ ನ್ಯಾಯಾಲಯ ವಿಚಾರಣೆ ನಡೆಸಲು ತೀರ್ಮಾನಿಸಿತು.

ವಿಚಾರಣೆ ನಡೆಸಿದ ಹೈಕೋರ್ಟ್‌ ಮರು ಎಣಿಕೆಗೆ ಆದೇಶಿಸಿತ್ತು..

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.