2026-05-11 06:48:26

shringeri: rajegowda continued as mla, shock to jeevaraj; supreme court| ಶೃಂಗೇರಿ: ಮತ್ತೆ ಕಾಂಗ್ರೆಸ್ ನ ರಾಜೇಗೌಡಗೆ ಶಾಸಕ ಸ್ಥಾನ; ಜೀವರಾಜ್‌ ಗೆ ಶಾಕ್ ಕೊಟ್ಟ ಸುಪ್ರೀಂಕೋರ್ಟ್‌ | Speed News Kannada

shringeri: rajegowda continued as mla, shock to jeevaraj; supreme court| ಶೃಂಗೇರಿ: ಮತ್ತೆ ಕಾಂಗ್ರೆಸ್ ನ ರಾಜೇಗೌಡಗೆ ಶಾಸಕ ಸ್ಥಾನ; ಜೀವರಾಜ್‌ ಗೆ ಶಾಕ್ ಕೊಟ್ಟ ಸುಪ್ರೀಂಕೋರ್ಟ್‌ | Speed News Kannada

ನವದೆಹಲಿ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌  ಬಿಗ್‌ ರಿಲೀಫ್‌ ನೀಡಿದೆ.

ಕರ್ನಾಕಟ ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿ, ವಿಚಾರಣೆಯನ್ನು ಮೇ.21 ಕ್ಕೆ ಮುಂದೂಡಿದೆ. ಜತೆಗೆ ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ಜಾರಿಗೊಳಿಸಿದೆ.

ಈ ಮೂಲಕ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದೆ. ಕಳೆದ ವಾರವಷ್ಟೇ ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್ ಅವರಿ​​ಗೆ ಹಿನ್ನಡೆಯಾಗಿದೆ.

ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ರಾಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಕುರಿತು ಇಂದು ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿತು. ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿತು.

ಅಂಚೆ ಮತ ಮರು ಎಣಿಕೆಯಲ್ಲಿ ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀ ಕೋರ್ಟ್‌ ಸೂಚನೆ ನೀಡಿದ್ದು, ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.