2026-06-08 01:32:32

ಸಿಕ್ಕ ಅವಕಾಶದಲ್ಲಿ ಸಿದ್ದರಾಮಯ್ಯ ಉತ್ತಮ ಸಾಧನೆ ಮಾಡಿದ್ದಾರೆ:ಡಿಕೆ ಶಿವಕುಮಾರ್ ಮೆಚ್ಚುಗೆ| Speed News Kannada

 ಸಿಕ್ಕ ಅವಕಾಶದಲ್ಲಿ ಸಿದ್ದರಾಮಯ್ಯ ಉತ್ತಮ ಸಾಧನೆ ಮಾಡಿದ್ದಾರೆ:ಡಿಕೆ ಶಿವಕುಮಾರ್ ಮೆಚ್ಚುಗೆ| Speed News Kannada

ಬೆಂಗಳೂರು: ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು ಡಿಕೆ ಶಿವಕುಮಾರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸಿದ್ದರಾಮಯ್ಯ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.

ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ.

ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ ಎಂದು ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.