ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರು ಅಂಗೀಕರಿಸಿದ್ದು ಸಚಿವ ಸಂಪುಟವನ್ನು ಕೂಡಲೇ ಜಾರಿಗೆ ಬರುವಂತೆ ವಿಸರ್ಜಸಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ರಾಜ್ಯಪಾಲರು ಇಂದು ಮುಂಜಾನೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ರಾಜ್ಯಪಾಲರು ಸಂವಿಧಾನದ 164(1) ನೇ ವಿಧಿಯ ಅಡಿ ರಾಜೀನಾಮೆ ಅಂಗೀಕರಿಸಿದ್ದಾರೆ. ನಿನ್ನೆ ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದರು.