2026-06-08 05:21:28

iಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ| Speed News Kannada

iಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ| Speed News Kannada

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಥ್‌ ಅವರು ಅಂಗೀಕರಿಸಿದ್ದು ಸಚಿವ ಸಂಪುಟವನ್ನು ಕೂಡಲೇ ಜಾರಿಗೆ ಬರುವಂತೆ ವಿಸರ್ಜಸಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ರಾಜ್ಯಪಾಲರು ಇಂದು ಮುಂಜಾನೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ರಾಜ್ಯಪಾಲರು ಸಂವಿಧಾನದ 164(1) ನೇ ವಿಧಿಯ ಅಡಿ ರಾಜೀನಾಮೆ ಅಂಗೀಕರಿಸಿದ್ದಾರೆ. ನಿನ್ನೆ ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರು  ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.