2026-06-08 01:23:25

Siddaramaiah | ಬಜೆಟ್‌ ಪೂರ್ವಭಾವಿ ಸಭೆ ಆರಂಭ; ಮಾರ್ಚ್‌ ನಲ್ಲಿ 17ನೇ ಬಜೆಟ್‌ ಮಂಡನೆಗೆ ಸಿದ್ದರಾಮಯ್ಯ ತಯಾರಿ | Speed News kannada

Siddaramaiah | ಬಜೆಟ್‌ ಪೂರ್ವಭಾವಿ ಸಭೆ ಆರಂಭ; ಮಾರ್ಚ್‌ ನಲ್ಲಿ 17ನೇ ಬಜೆಟ್‌ ಮಂಡನೆಗೆ ಸಿದ್ದರಾಮಯ್ಯ ತಯಾರಿ | Speed News kannada

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಹಸ್ತಾಂತರ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹಣಕಾಸು ಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ. ರೇಸ್‌ ಕೋರ್ಸ್‌ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್‌ ಫುರ್ವಭಾವಿ ಸಭೆ ನಡೆಯುತ್ತಿದೆ. 
ನಿನ್ನೆಯಷ್ಟೇ ವಿಧಾನ ಮಂಡಲದ ಅಧಿವೇಶನ ಮುಗಿದಿದ್ದು ಇಂದಿನಿಂದ ಪ್ರತಿದಿನ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 
ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಪ್ರತ್ಯೇಕವಾಗಿ ಸಭೆಗೆ ಕರೆಯಲಾಗಿದೆ.
ಇದೀಗ ನಡೆಯುತ್ತಿರುವ ಸಭೆಯಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ,  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ‌ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ ತಿಂಗಳಲ್ಲಿ ತಮ್ಮ 17 ನೇ ಬಜೆಟ್‌ ಮಂಡಿಸಲಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.