2026-06-08 02:14:40

siddarameshwara award given to pro.siddaramaiah| ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ| Speed News Kannada

siddarameshwara award given to pro.siddaramaiah| ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಕಾಯಕಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ| Speed News Kannada

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ  ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2025-26ನೇ ಸಾಲಿನ ಕಾಯಕಯೋಗಿ ಸಿದ್ದರಾಮೇಶ್ವರ ‌ಪ್ರಶಸ್ತಿ‌ ನೀಡಿ ಗೌರವಿಸಲಾಯಿತು. ಸಿದ್ದರಾಮೇಶ್ವರರ ಕುರಿತು ಬರೆದಿರುವ 'ಸಿದ್ದರಾಮ ಬೆಳ್ಳಿ ಕಿರಣ' ಪುಸ್ತಕವನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು

ಸಮಾರಂಭದಲ್ಲಿ ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಪಶುಸಂಗೋಪನೆ ಸಚಿವ ವೆಂಕಟೇಶ್,  ಶಾಸಕರಾದ ಹರೀಶ್ ಗೌಡ, ಅನಿಲ್ ಚಿಕ್ಕಮಾಧು, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

 

.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.