2026-04-23 10:53:35

Singer Mangli cheated of 10 crores|ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ|Speed News Kannada

Singer Mangli cheated of 10 crores|ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ|Speed News Kannada

ಖ್ಯಾತ ಜಾನಪದ ಗಾಯಕಿ ಮಂಗ್ಲಿ ಹಾಗೂ ಅವರ ಸಹೋದರ ಶಿವ ವಿರುದ್ಧ ಹತ್ತು ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಹೈದರಾಬಾದ್‌ನ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 100 ಜನರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿ, ಈಗ ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಕೀಲ ಸುಬ್ಬರಾವ್ ಎಂಬುವವರು ಸಂತ್ರಸ್ತರ ಪರವಾಗಿ ದೂರು ನೀಡಿದ್ದು, ಪೊಲೀಸರು ಐಪಿಸಿ ಸೆಕ್ಷನ್ 351(2) ಹಾಗೂ 352 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಹೂಡಿಕೆ ಮಾಡಿದ ಹಣಕ್ಕೆ ನಿಗದಿತ ಅವಧಿಯಲ್ಲಿ ಲಾಭಾಂಶ ನೀಡದಿದ್ದಾಗ ಸಂತ್ರಸ್ತರು ವಕೀಲರನ್ನು ಸಂಪರ್ಕಿಸಿದ್ದರು. ಈ ಕುರಿತು ಪ್ರಶ್ನಿಸಲು ಹೋದಾಗ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರ ಶಿವ ಅವರು ತಮಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ವಕೀಲರು ಗಂಭೀರವಾಗಿ ಆರೋಪಿಸಿದ್ದಾರೆ. ತಮಗೆ ಪ್ರಾಣಾಪಾಯವಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಹೆಚ್ಚಿನ ಲಾಭದ ಆಸೆಗೆ ಬಿದ್ದು ಹೂಡಿಕೆದಾರರು ಈಗ ಕಂಗಾಲಾಗಿದ್ದಾರೆ.

ಸದ್ಯ ಈ ಪ್ರಕರಣ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಹಣಕಾಸಿನ ವ್ಯವಹಾರದಲ್ಲಿ ಗಾಯಕಿಯ ಪಾತ್ರ ಎಷ್ಟಿದೆ ಮತ್ತು ಸಂಗ್ರಹವಾದ ಹತ್ತು ಕೋಟಿ ರೂಪಾಯಿ ಹಣ ಏನಾಗಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅನೇಕ ಪ್ರಸಿದ್ಧ ಹಾಡುಗಳ ಮೂಲಕ ಮನೆಮಾತಾಗಿದ್ದ ಮಂಗ್ಲಿ ಅವರಿಗೆ ಈ ಕಾನೂನು ಸಂಕಷ್ಟ ಈಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.