2026-06-08 01:33:18

SIR begins from may30th in 16 states including karnataka| ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಎಸ್‌ ಐಆರ್‌; ಮೇ 30ರಿಂದ ಆರಂಭ|Speed News Kannada

SIR begins from may30th in 16 states including karnataka| ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಎಸ್‌ ಐಆರ್‌; ಮೇ 30ರಿಂದ ಆರಂಭ|Speed News Kannada

ನವದೆಹಲಿ: ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದೇ 30ರಿಂದ  3ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ನಡೆಯಲಿದೆ. ಕರ್ನಾಟಕ, ತೆಲಂಗಾಣ, ಪಂಜಾಬ್, ಮೇಘಾಲಯ, ಮಹಾರಾಷ್ಟ್ರ ದೆಹಲಿ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ಜಾರ್ಖಂಡ್, ನಾಗಾಲ್ಯಾಂಡ್, ತ್ರಿಪುರ, ದಾದರ್ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ ಮೂರನೇ ಹಂತದಲ್ಲಿ ಎಸ್‌ಐಆರ್ ನಡೆಯಲಿದೆ.

3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು 36.73 ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.

ಸುಮಾರು 99 ಕೋಟಿ ಮತದಾರರಲ್ಲಿ 60 ಕೋಟಿ ಜನರು ಈ ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಈಗಾಗಲೇ ತೊಡಗಿಸಿಕೊಂಡಿದ್ದಾರೆ. ಉಳಿದ ಸುಮಾರು 40 ಕೋಟಿ ಮತದಾರರು 17 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತಾವಿತ ಎಸ್‌ಐಆರ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದುವರೆಗೆ 10 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆದಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕೇರಳಂ, ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಗುಜರಾತ್, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢದಲ್ಲಿ ಎಸ್‌ಐಆರ್ ಪೂರ್ಣಗೊಂಡಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.