2026-06-25 03:53:06

six drug peddlers arrest; 15 cr drug seized| ಭರ್ಜರಿ ಬೇಟೆ: 15 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; 6 ಡ್ರಗ್‌ ಪೆಡ್ಲರ್‌ ಗಳ ಬಂಧನ| Speed News Kannada

six drug peddlers arrest; 15 cr drug seized| ಭರ್ಜರಿ ಬೇಟೆ: 15 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ; 6 ಡ್ರಗ್‌ ಪೆಡ್ಲರ್‌ ಗಳ ಬಂಧನ| Speed News Kannada

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ಮೂಮದುವರಸಿರುವ ಪೊಲೀಸರು  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14.75 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಂದಿನಿ ಲೇಔಟ್ ಪೊಲೀಸರು ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಸೌಗೇಶ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅವರಿಂದ 5.75 ಕೋಟಿ ರೂ.ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ಜಪ್ತಿ ಮಾಡಿದ್ದಲಾಗಿದೆ.

ಆರೋಪಿಗಳು ವಿದೇಶದಿಂದ ಹೈಡ್ರೋ ಗಾಂಜಾವನ್ನು ತರಿಸಿಕೊಂಡು ಸ್ಥಳೀಯ ಗ್ರಾಹಕರಿಗೆ  ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕೇರಳದಲ್ಲಿಯೂ ಇವರ ವಿರುದ್ಧ  ಸಣ್ಣಪುಟ್ಟ ಕೆಲಸ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಪ್ರಕರಣದಲ್ಲಿ ಯಶವಂತಪುರ ಪೊಲೀಸರು ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಬೇಧಿಸಿದ್ದಾರೆ. ಡ್ರಗ್ಸ್ ಮಾರಾಟಕ್ಕೆ ಮುಂದಾಗಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್​ ಅವರನ್ನು ಬಂಧಿಸಲಾಗಿದೆ. ಇವರಿಂದ 9 ಕೋಟಿ ರೂ. ಮೌಲ್ಯದ 8 ಕೆಜಿ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್  ಖರೀದಿಸಿ ಆಯ್ದ ಗ್ರಾಹಕರಿಗೆ  ಪೂರೈಸುತ್ತಿದ್ದರು. ಆರೋಪಿಗಳಲ್ಲಿ  ಒಬ್ಬನಾದ ಸೈಯದ್ ಸುಹೇಲ್ ಹೊಸಕೋಟೆ ಠಾಣೆಯ ರೌಡಿಶೀಟರ್ ಆಗಿದ್ದು, ಈ ಹಿಂದೆ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಇವರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.