2026-06-25 02:28:00

sleeper bus catches fire late night; passengers escape| ತಡರಾತ್ರಿ ಹೊತ್ತಿ ಉರಿದ ಸ್ಲೀಪರ್‌ ಬಸ್; ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾದ ಪ್ರಯಾಣಿಕರು: |Speed News Kannada

sleeper bus catches fire late  night; passengers escape| ತಡರಾತ್ರಿ ಹೊತ್ತಿ ಉರಿದ ಸ್ಲೀಪರ್‌ ಬಸ್; ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾದ ಪ್ರಯಾಣಿಕರು: |Speed News Kannada

ಹಾಸನ : ಖಾಸಗಿ ಸ್ಲೀಪರ್ ಬಸ್ ​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಅದೃಷ್ಡವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಈ ಖಾಸಗಿ ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಶಾಂತಿಗ್ರಾಮ ಎಂಬಲ್ಲಿ ಬಸ್ ನ ಟೈರ್ ಸ್ಫೋಟಗೊಂಡು ಹೊತ್ತಿಕೊಂಡು ಸಣ್ಣ ಶಬ್ದ ಕೇಳಿಸಿದೆ. ಆಗ ಅನುಮಾನಗೊಂಡ ಪ್ರಯಾಣಿಕರೊಬ್ಬರು ಕಿಟಿಕಿಯ ಪರದೆ ಸರಿಸಿ ನೋಡಿದಾಗ ಟೈರ್‌ ಉರಿಯುತ್ತಿರುವುದು ಕಂಡು ಬಂದಿದೆ. ಬಸ್​ನಲ್ಲಿದ್ದ ಪ್ರಯಾಣಿಕರೊಬ್ಬರು ಕಿಟಕಿಯ ಪರದೆಯನ್ನು ಸರಿಸಿ ನೋಡಿದಾಗ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು​ ಚಾಲಕ ಹಾಗೂ ಸಹ ಪ್ರಯಾಣಿಕರನ್ನು ಎಚ್ಚರಿಸಿದ್ದಾರೆ.

ಮೊದಲು ಟೈರ್​ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸಣ್ಣದೊಂದು ಶಬ್ದ ಕೇಳಿ ಬಂದಾಗ, ನಂತರ ಚಾಲಕ ಬಸ್​ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ.

ಇವರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮಾಹಿತಿ ಸಿಕ್ಕ ಕೂಡಲೇ ಹಾಸನ ಮತ್ತು ಶಾಂತಿಗ್ರಾಮದಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಕೊನೆಗೂ ಬೆಂಕಿಯನ್ನು ಪೂರ್ಣವಾಗಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ಪ್ರಯಾಣಿಕರನ್ನು ಹಾಸನ ಪೊಲೀಸರು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮತ್ತೊಂದು ಬಸ್‌  ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.