2026-06-08 02:42:59

Smriti Mandhana breaks records of legends | ದಿಗ್ಗಜರ ದಾಖಲೆಗಳನ್ನ ಮುರಿದ ಸ್ಮೃತಿ ಮಂದಾನ | Speed news kannada

Smriti Mandhana breaks records of legends | ದಿಗ್ಗಜರ ದಾಖಲೆಗಳನ್ನ ಮುರಿದ ಸ್ಮೃತಿ ಮಂದಾನ | Speed news kannada

ಟೀಮ್‌ ಇಂಡಿಯಾದ ಆಟಗಾರ್ತಿ  ಸ್ಮೃತಿ ಮಂಧಾನ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಯಂತಹ ದಿಗ್ಗಜರ ದಾಖಲೆಗಳನ್ನೇ ಹಿಂದಿಕ್ಕಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸವನ್ನು ನಿಮರ್ಮಿಸಿದ್ದಾರೆ. ಡರ್ಬನ್‌ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕ  ಕಣಕ್ಕಿಳಿದ ಸ್ಮೃತಿ ಮಂಧಾನ 13 ರನ್​ ಗಳಿಸಿದ್ದರು. ಈ ಹದಿಮೂರು ರನ್​ಗಳೊಂದಿಗೆ ಸ್ಮೃತಿ ಮಂಧಾನ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 159 ಪಂದ್ಯಗಳನ್ನಾಡಿರುವ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಭಾರತದ 161 ಟಿ20 ಪಂದ್ಯಗಳನ್ನಾಡಿರುವ ಸ್ಮೃತಿ ಮಂಧಾನ ಒಟ್ಟು 4,244 ರನ್‌ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.