2026-03-07 01:42:01

social committment is govt;s aim lakshmi hebbalkar Speed News Kannada

social committment is govt;s aim lakshmi hebbalkar  Speed News Kannada

ಕಾರ್ಕಳ:  ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಡೆದ ಕಿಸಾನ್ ಸಭಾ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇದುವರೆಗೂ 26 ಕಂತಿನ ಹಣವನ್ನು 1.24 ಕೋಟಿ ಮಹಿಳೆಯರಿಗೆ ‌ತಲಾ 52 ಸಾವಿರ ರೂಪಾಯಿಯಂತೆ ಹಾಕಿದ್ದೇವೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಒಂದು ಸೀಟು ಗೆದ್ದಿಲ್ಲ, ಆದರೆ ಉಡುಪಿ ಜಿಲ್ಲೆಯಲ್ಲಿ ಅತಿಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳು ಇದ್ದಾರೆ. ಇಡೀ ಕಾರ್ಕಳ ಕ್ಷೇತ್ರಾದ್ಯಂತ  ಉದಯ್ ಕುಮಾರ್ ಅವರು ಮನೆ ಮನೆಗೆ ತಿರುಗಿ ಗೃಹಲಕ್ಷ್ಮಿ ಯೋಜನೆಯು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದಾರೆ ಎಂದದರು.

ದೇಶ ಕಂಡ ಉತ್ತಮ ರಾಜಕೀಯ ಪಟು ವೀರಪ್ಪ ಮೊಯ್ಲಿ ಅವರ ಜೀವನ ನಮಗೆಲ್ಲ ಮಾದರಿ. ಬಡ ಮಕ್ಕಳಿಗೆ ಅನುಕೂಲ ಆಗುವ ದೃಷ್ಟಿಯಿಂದ ಸಿಇಟಿ ಆರಂಭಿಸಿ ಇಡೀ ದೇಶಕ್ಕೆ ಮಾದರಿಯಾದಂತಹ ಆಡಳಿತವನ್ನು ನೀಡಿದರು. ಅವರು ಆರಂಭಿಸಿದ ಸಿಇಟಿಯೇ ಮುಂದೆ ಕೇಂದ್ರ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ ( RTE) ಆರಂಭಕ್ಕೆ ಮಾದರಿ ಆಯಿತು ಎಂದರು.‌

ಅವರು ಆರಂಭಿಸಿದ ಮಹಾತ್ಮ ಗಾಂಧಿ ವಸತಿ ಶಾಲೆ ನಿಸ್ವಾರ್ಥತತೆಯಿಂದ ಕೆಲಸ ಮಾಡುತ್ತಿದೆ‌. ಬಡ ಮಕ್ಕಳಿಗೆ ಉಚಿತ ವಾಗಿ ಶಿಕ್ಷಣ ನೀಡುತ್ತಿದೆ. ವೀರಪ್ಪ ಮೊಯ್ಲಿ ಅವರ ಜೀವನವೇ ನಮಗೆ ಮಾರ್ಗದರ್ಶನ, ಅವರು ನಮಗೆ ಆದರ್ಶ. ಐದು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಸಮಾಜ ಸೇವೆ ಮಾಡುವುದು ಸುಲಭದ ಕೆಲಸವಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವೀರಪ್ಪ ಮೊಯ್ಲಿ ಅವರ ಕಾರ್ಯವನ್ನು ಶ್ಲಾಘಿಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ, ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.