2026-06-08 01:29:58

Sonia Gandhi criticizes Modi | ಖಮೇನಿ ಹತ್ಯೆ ಖಂಡಿಸದ ಮೋದಿ ನಿಲುವನ್ನು ಟೀಕಿಸಿದ ಸೋನಿಯಾ ಗಾಂಧಿ | Speed News Kannada

Sonia Gandhi criticizes Modi | ಖಮೇನಿ ಹತ್ಯೆ ಖಂಡಿಸದ ಮೋದಿ ನಿಲುವನ್ನು ಟೀಕಿಸಿದ ಸೋನಿಯಾ ಗಾಂಧಿ | Speed News Kannada

ನವದೆಹಲಿ: ಇರಾನ್‌ ನ ಪರಮೋಚ್ಚ ನಾಯಕ ಅಯಾತೊಲ್ಲಾ ಆಲಿ ಖಮೇನಿ ಅವರ ಹತ್ಯೆ ಕುರಿತು ಪ್ರಧಾನಿ ನರೆಂದ್ರ ಮೋದಿ ಅವರು ಮೌನ ವಹಿಸಿರುವುದನ್ನು ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಟೀಕಿಸಿದ್ದಾರೆ.  ಪತ್ರಿಕೆಯೊಂದಕ್ಕೆ ಬರದಿರುವ ಲೇಖನದಲ್ಲಿ ಈ ಖಮೇನಿ ಹತ್ಯೆ ಕುರಿತು ಸರ್ಕಾರದ ಮೌನ ಸರಿಯಲ್ಲ. ಈ 'ಆತಂಕಕಾರಿ' ಮೌನ ಕುರಿತು ಬಜೆಟ್ ಅಧಿವೇಶದನ ಎರಡನೇ ಅವಧಿಯಲ್ಲಿ ಮುಕ್ತವಾಗಿ ಚರ್ಚಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.
ಸರ್ಕಾರದ ಈ ನಡೆಯನ್ನು ತಟಸ್ಥ ಧೋರಣೆ ಎಂದು ಬಣ್ಣಿಸಲಾಗುತ್ತಿದೆ. ಆದರೆ ಇದು ತಟಸ್ಥ ಧೋರಣೆ ಅಲ್ಲ, ಬದಲಿಗೆ ತಿರಸ್ಕಾರ ಧೋರಣೆಯಾಗಿದೆ. ಇದು ಭಾರತದ ವಿದೇಶಾಂಗ ನೀತಿಯ ದಿಕ್ಕು ಹಾಗೂ ವಿಶ್ವಾಸಾರ್ಹತೆ ಕುರಿತು ಗಂಭೀರ ಸಂಶಯಗಳನ್ನು ಹುಟ್ಟುಹಾಕಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಹತ್ಯೆಯನ್ನು ಖಂಡಿಸುವುದರಿಂದ ಭಾರತ ಸರ್ಕಾರ ದೂರ ಉಳಿದಿರುವುದು ಸರಿಯಾದ ನಡೆಯಲ್ಲ. ಆರಂಭದಲ್ಲಿ, ಅಮೆರಿಕ-ಇಸ್ರೇಲ್ ನಡೆಸಿದ ಬೃಹತ್ ದಾಳಿಯನ್ನು ನಿರ್ಲಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅದಕ್ಕೂ ಮೊದಲು ನಡೆದ ಘಟನೆಗಳ ಸರಮಾಲೆಯನ್ನು ಪ್ರಸ್ತಾಪಿಸದೆ ಕೇವಲ ಯುಎಇ ಮೇಲಿನ ಇರಾನ್‌ ಪ್ರತೀಕಾರದ ದಾಳಿಯನ್ನು ಖಂಡಿಸುವುದಕ್ಕೆ ಸೀಮಿತರಾಗಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿದೇಶಿ ನಾಯಕರೊಬ್ಬರ ಉದ್ದೇಶಿತ ಹತ್ಯೆಯ ಸಂದರ್ಭದಲ್ಲಿ ನಮ್ಮ ದೇಶವು ಅಂತರರಾಷ್ಟ್ರೀಯ ಕಾನೂನಿನ ರಕ್ಷಣೆಗೆ ನಿಲ್ಲಬೇಕು. ಆದರೆ ಪ್ರಧಾನಿ ಮೋದಿ ಅವರು ಹಾಗೆ ಮಾಡಲಿಲ್ಲ. ಆದ್ದರಿಂದ ಅವರ ನಡೆ ನಮ್ಮ ವಿದೇಶಾಂಗ ನೀತಿಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.