2026-06-08 02:43:05

Soon there will be no tolls on the Nice road for bikes | ಶೀಘ್ರದಲ್ಲೇ ಬೈಕ್‌ಗಳಿಗೆ ನೈಸ್ ರಸ್ತೆಯಲ್ಲಿ ಟೋಲ್ ಇಲ್ಲ | Speed News Kannada

Soon there will be no tolls on the Nice road for bikes | ಶೀಘ್ರದಲ್ಲೇ ಬೈಕ್‌ಗಳಿಗೆ ನೈಸ್ ರಸ್ತೆಯಲ್ಲಿ ಟೋಲ್ ಇಲ್ಲ | Speed News Kannada

ಬೆಂಗಳೂರು ನಗರದ ನೈಸ್ ರಸ್ತೆಯಲ್ಲಿ ಸಂಚಾರ ನಡೆಸುವ ಬೈಕ್ ಸವಾರರಿಗೆ ಮಹತ್ವದ ಅಪ್‌ಡೇಟ್ ಒಂದಿದೆ. ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆ ಶೀಘ್ರದಲ್ಲೇ ಟೋಲ್ ಫ್ರೀಯಾಗಲಿದೆ. ವಿಧಾನ ಪರಿಷತ್ ಕಲಾಪದಲ್ಲಿ ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನಿಡಿದ್ದಾರೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಗೆ ವಿಧಿಸಲಾಗುತ್ತಿರುವ ಟೋಲ್ ಶುಲ್ಕ ರದ್ದು, ಹಲವಾರು ವರ್ಷಗಳಿಂದ ನೈಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ರೈತರಿಗೆ, ನಿವೇಶನ ಮಾಲೀಕರಿಗೆ ದೊರೆಯಬೇಕಾದ ಪರಿಹಾರದಲ್ಲಿ ಆಗಿರುವ ವಿಳಂಬದ ಕುರಿತು ಸಚಿವರು ಮಾತನಾಡಿದ್ದಾರೆ.
ಸಚಿವರ ಉತ್ತರ
ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ನೈಸ್ ರಸ್ತೆ ಸಂಪರ್ಕ ಕಲ್ಪಿಸುವ 1.5ಕಿ.ಮೀ. ಉದ್ದದ ಹೊಸ ರಸ್ತೆಯನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುತ್ತದೆ.
ಗೃಹ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಚಿವ ಸಂಪುಟದ ಉಪ ಸಮಿತಿ ನೈಸ್ ಯೋಜನೆಯ ಸ್ಥಿತಿ, ಒಪ್ಪಂದದ ಷರತ್ತುಗಳು, ಟೋಲ್ ವಸೂಲಿ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಲಿದೆ.
ಉಪ ಸಮಿತಿ ತನ್ನ ವರದಿ ಸಲ್ಲಿಸಿದ ಬಳಿಕ ದ್ವಿಚಕ್ರ ವಾಹನಗಳಿಗೆ ನೈಸ್ ರಸ್ತೆಯಲ್ಲಿ ಟೋಲ್ ರದ್ದುಪಡಿಸುವ ಕುರಿತು ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.