2026-04-23 09:22:37

South African batsman retires from international cricket | ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಸೌತ್ ಆಫ್ರಿಕಾ ದಾಂಡಿಗ | Speed news kannada

South African batsman retires from international cricket | ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ  ಸೌತ್ ಆಫ್ರಿಕಾ ದಾಂಡಿಗ | Speed news kannada

ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದು ಅವರ ನಿವೃತ್ತಿಯ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. 57 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಡಸ್ಸೆನ್ 10 ಅರ್ಧಶತಕಗಳೊಂದಿಗೆ 1406 ರನ್​ ಗಳಿಸಿದ್ದಾರೆ. ಹಾಗೆಯೇ 18 ಟೆಸ್ಟ್ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವನ್ನು ಪ್ರತಿನಿಧಿಸಿರುವ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 6 ಅರ್ಧಶತಕಗಳೊಂದಿಗೆ ಒಟ್ಟು 905 ರನ್​​ ಕಲೆಹಾಕಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.