2026-05-03 05:53:39

SP Lavanya succumbs to cancer|ಕ್ಯಾನ್ಸರ್‌ಗೆ ಬಲಿಯಾದ ಎಸ್ಪಿ ಲಾವಣ್ಯ|Speed News Kannada

SP Lavanya succumbs to cancer|ಕ್ಯಾನ್ಸರ್‌ಗೆ ಬಲಿಯಾದ ಎಸ್ಪಿ ಲಾವಣ್ಯ|Speed News Kannada

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಿಎನ್‌ ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು.ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಎಸ್ಪಿಯಾಗಿದ್ದ ಲಾವಣ್ಯ, ಹಲವು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಹಾಗೂ ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದರು. ಮೃತರು 10 ವರ್ಷದ ಗಂಡು ಮಗು ಮತ್ತು 3 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಪೊಲೀಸ್ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.