2026-06-08 01:20:24

special playground to disabled children in udupi| ಉಡುಪಿಯಲ್ಲಿ ವಿಶೇಷ ಮಕ್ಕಳಿಗಾಗಿ ‘ಸಾಮರ್ಥ್ಯವನ ಪಾರ್ಕ್’ ಗೆ ಶಂಕುಸ್ಥಾಪನೆ! |Speed News Kannada

special playground to disabled children in udupi| ಉಡುಪಿಯಲ್ಲಿ ವಿಶೇಷ ಮಕ್ಕಳಿಗಾಗಿ ‘ಸಾಮರ್ಥ್ಯವನ ಪಾರ್ಕ್’ ಗೆ ಶಂಕುಸ್ಥಾಪನೆ! |Speed News Kannada

ಉಡುಪಿ: ಉಡುಪಿಯ ವಿಶೇಷ ಮಕ್ಕಳ ಸರ್ವತೋಮುಖದ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯವನ ಪಾರ್ಕ್” ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಇಂದು  ಶಂಕುಸ್ಥಾಪನೆ ನೆರವೇರಿಸಿದರು.

ಈ ವಿಶೇಷ ಉದ್ಯಾನವನವನ್ನು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸ್ಥಾಪಿಸಲಾಗುತ್ತಿದೆ.

​ವಿಶೇಷ ಚೇತನ ಮಕ್ಕಳಿಗೆ ಮುಕ್ತವಾಗಿ ಆಟವಾಡಲು ಹಾಗೂ ಅವರಲ್ಲಿ ನವಚೇತನ ತುಂಬಲು ಈ ಪಾರ್ಕ್ ಮುಂದಿನ ದಿನಗಳಲ್ಲಿ ಪ್ರಮುಖ ವೇದಿಕೆಯಾಗಲಿದೆ.

ಈ ವೇಳೆ ಜಿಲ್ಲಾಧಿಕಾರಿಗಳಾದ  ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಪ್ರಮುಖರಾದ ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.