2026-06-08 04:05:34

SRH player Abhishek Sharma amazing record | SRH ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆ | Speed news kannada

SRH player Abhishek Sharma amazing record | SRH ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ದಾಖಲೆ | Speed news kannada

ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 68 ಎಸೆತಗಳಲ್ಲಿ 10 ಫೋರ್ ಹಾಗೂ 10 ಸಿಕ್ಸರ್​ಗಳೊಂದಿಗೆ ಅಜೇಯ 135 ರನ್​ ಬಾರಿಸಿದರು. 135 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಎರಡು ಬಾರಿ 130+ ಸ್ಕೋರ್​ ಗಳಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಯಾವುದೇ ಬ್ಯಾಟರ್ 2 ಬಾರಿ 130+ ರನ್​ಗಳ ವೈಯುಕ್ತಿಕ ಇನಿಂಗ್ಸ್ ಆಡಿಲ್ಲ. ಇದೀಗ ಅಭಿಷೇಕ್ ಶರ್ಮಾ 2 ಶತಕಗಳೊಂದಿಗೆ ಈ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು 130+ ಸ್ಕೋರ್​ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಭಿಷೇಕ್ ಈವರೆಗೆ ಟಿ20 ಕ್ರಿಕೆಟ್​​ನಲ್ಲಿ 4 ಬಾರಿ 130+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ (3 ಬಾರಿ) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.