2026-04-23 09:09:36

SSLC exam | SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ | Speed news kannada

SSLC exam | SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಭಾರೀ ಮುಖಭಂಗ | Speed news kannada

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಲಾಗುವುದು ಮತ್ತು ವಾರ್ಷಿಕ ಪರೀಕ್ಷೆಯ ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತೀವ್ರ ಹಿನ್ನಡೆಯಾಗಿದೆ.

ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರದ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಿರಾಳವಾದಂತಾಗಿದೆ.

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಏಕ ಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.

ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ಈ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.